ADVERTISEMENT

ಸಾರ್ವತ್ರಿಕ ಮುಷ್ಕರ ಇಂದು

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 21:58 IST
Last Updated 25 ನವೆಂಬರ್ 2020, 21:58 IST

ಬೆಂಗಳೂರು: ಕೇಂದ್ರ ಸರ್ಕಾರದ ರೈತ, ಕಾರ್ಮಿಕ ಹಾಗೂ ಜನವಿರೋಧಿ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ಸಾರ್ವತ್ರಿಕ ಮುಷ್ಕರದ ಅಂಗವಾಗಿ ರಾಜ್ಯದಲ್ಲೂ ಕಾರ್ಮಿಕರು ಗುರುವಾರ ಮುಷ್ಕರ ನಡೆಸಲಿದ್ದಾರೆ.

ಅಂಗಡಿಗಳು, ಬಸ್‌, ಲಾರಿಗಳ ಸಂಚಾರ ಎಂದಿನಂತೆ ಇರಲಿವೆ. ಬೆಂಗಳೂರಿನಲ್ಲಿ ಆಟೋರಿಕ್ಷಾ, ಟ್ಯಾಕ್ಸಿ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

‘ಪೀಣ್ಯ, ದಾಬಸ್‌ಪೇಟೆ, ವೈಟ್‌ಫೀಲ್ಡ್, ಜಿಗಣಿ, ಬೊಮ್ಮಸಂದ್ರ, ರಾಜಾಜಿನಗರ ಸೇರಿ ಎಲ್ಲಾ ಕೈಗಾರಿಕಾ ಪ್ರದೇಶಗಳಲ್ಲಿನ ಕಾರ್ಖಾನೆಗಳು ಬಂದ್ ಆಗಲಿವೆ’ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸಂಚಾಲಕ ಡಿ.ವಿಜಯಭಾಸ್ಕರ್ ‌ತಿಳಿಸಿದರು. ‘ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದು, ರೈತ ಮತ್ತು ದಲಿತ ಸಂಘಟನೆಗಳು ಬೆಂಬಲ ಸೂಚಿಸಿವೆ. ಗುರುವಾರ ಬೆಳಿಗ್ಗೆ 10.30ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನಕ್ಕೆ ಮೆರವಣಿಗೆಯಲ್ಲಿ ತೆರಳಿ ಪ್ರತಿಭಟನಾ ಸಭೆ ನಡೆಸಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.