ADVERTISEMENT

ಅಕ್ಕ ಪಡೆ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಾಗತ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2025, 17:31 IST
Last Updated 17 ನವೆಂಬರ್ 2025, 17:31 IST
   

ಬೆಂಗಳೂರು: ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಸಕಾಲದಲ್ಲಿ ರಕ್ಷಣೆ ನೀಡುವ ಉದ್ದೇಶದಿಂದ ರಾಜ್ಯದಾದ್ಯಂತ ‘ಅಕ್ಕ ಪಡೆ’ ಆರಂಭಿಸುತ್ತಿರುವುದನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಸ್ವಾಗತಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಪೊಲೀಸ್ ಇಲಾಖೆ ವತಿಯಿಂದ ಅಕ್ಕ ಪಡೆ ಯೋಜನೆಗೆ ಚಾಲನೆಗೊಳಿಸಿ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿರುವುದು ಸಂತೋಷದ ವಿಚಾರವಾಗಿದೆ. ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಹಿತದೃಷ್ಟಿಯಿಂದ ಇದೊಂದು ಪರಿಣಾಮಕಾರಿ ಮತ್ತು ಮಹತ್ತರ ಬದಲಾವಣೆಯ ಯೋಜನೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಮಹಿಳೆಯರಿಗೆ ಮತ್ತು ಮಕ್ಕಳಿಗೆ ಭಯ ಮುಕ್ತ ವಾತಾವರಣವನ್ನು ಸೃಷ್ಟಿಸುವ ಜೊತೆಗೆ ಅಕ್ಕ ಪಡೆ ಸಹಾಯವಾಣಿಯಿಂದ ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು, ಬಾಲ್ಯವಿವಾಹ, ಮಕ್ಕಳ ಕಳ್ಳ ಸಾಗಣೆಯಂತಹ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಮತ್ತು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.