ಬೆಂಗಳೂರು: ಯುಗದರ್ಶಿನಿ ಮಹಿಳಾ ಫೌಂಡೇಷನ್ ಇದೇ 26ರಿಂದ 28ರವರೆಗೆ ಉತ್ತರ ಪ್ರದೇಶದ ವಾರಾಣಸಿಯ ಸ್ವತಂತ್ರತಾ ಭವನದಲ್ಲಿ ಅಖಿಲ ಭಾರತ ಮಹಿಳಾ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದೆ.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೌಂಡೇಷನ್ ಅಧ್ಯಕ್ಷೆ ಸರಸ್ವತಿ ಚಿಮ್ಮಲಗಿ, ‘ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗ ಮತ್ತು ಭಾಷಾ ನಿಕಾಯಗಳ ಸಹಯೋಗದಲ್ಲಿ ಈ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಮಹಿಳಾ ಸಾಹಿತ್ಯದ ಉನ್ನತೀಕರಣವು ಸಮ್ಮೇಳನದ ಆಶಯವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ದೇಶದ 70 ಸಾಧಕರಿಗೆ ‘ಯುಗದರ್ಶಿನಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ’ ಎಂದು ತಿಳಿಸಿದರು.
‘ಯುವಕಾವ್ಯಧಾರೆ, ಬಹುಭಾಷಾ ಕವಿಗೋಷ್ಠಿ, ಕನ್ನಡ ಕವಿಗೋಷ್ಠಿಗಳು ನಡೆಯಲಿವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.