ಬೆಂಗಳೂರು: ಜಾತಿಗಣತಿಗೆ ಸಂಬಂಧಿಸಿದ ಕಾಂತರಾಜ ವರದಿಗೆ ಎಲ್ಲ ಪಕ್ಷಗಳು ಬೆಂಬಲಿಸಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ದಲಿತ ಅಲ್ಪಸಂಖ್ಯಾತರ ಸಂಘ ಆಗ್ರಹಿಸಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಉದಯಶಂಕರ್, ‘ರಾಜ್ಯದಲ್ಲಿರುವ ಎಲ್ಲ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರ ಸೌಲಭ್ಯಗಳನ್ನು ಹಂಚಿಕೆ ಮಾಡಬೇಕು. ಅಂದಾಗ ಮಾತ್ರ ಪ್ರಜಾಪ್ರಭುತ್ವ ಹಾಗೂ ಸಾಮಾಜಿಕ ನ್ಯಾಯಕ್ಕೆ ಒಂದು ಅರ್ಥ ಬರುತ್ತದೆ. ಆದರೆ, ಇದಕ್ಕೆ ಕೆಲ ಸಮುದಾಯಗಳು ಆಕ್ಷೇಪ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ’ ಎಂದು ಹೇಳಿದರು.
‘ಕಾಂತರಾಜ ಅವರ ನೇತೃತ್ವದಲ್ಲಿ ನಡೆದ ಜಾತಿ ಗಣತಿ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಸ್ವೀಕರಿಸಿ ಅದನ್ನು ಬಹಿರಂಗಗೊಳಿಸಬೇಕು. ಇದರಿಂದ, ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಸ್ಥಿತಿಯ ವಾಸ್ತವ ಅರಿಯಲು ವರದಿ ಸಹಾಯಕವಾಗಲಿದೆ. ನಂತರ ಅದನ್ನು ಸಾರ್ವಜನಿಕರ ಚರ್ಚೆಗೊಳಪಡಿಸಿ, ಅದರ ಸಾದಕ–ಬಾಧಕಗಳನ್ನು ಪರಾಮರ್ಶಿಸಿ ನಂತರ ಅದನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಸಂಘದ ಸಂಚಾಲಕ ಸಿ.ಕೆ. ರವಿಚಂದ್ರ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.