ADVERTISEMENT

ಶೇ 15ರಷ್ಟು ಕಮಿಷನ್‌ ಆರೋಪ ಸುಳ್ಳು: ಕಾಂಗ್ರೆಸ್

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2023, 15:27 IST
Last Updated 12 ಆಗಸ್ಟ್ 2023, 15:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಬಿಎಂಪಿ ಗುತ್ತಿಗೆದಾರರು ಮಾಡಿರುವ ಶೇ 15ರಷ್ಟು ಕಮಿಷನ್‌ ಆರೋಪ ಸತ್ಯಕ್ಕೆ ದೂರವಾಗಿದೆ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಬಾಲರಾಜೇಗೌಡ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು, ‘ಮುಂಬರುವ ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಸಾಧ್ಯತೆ ಇದೆ. ಅದನ್ನು ತಪ್ಪಿಸಲು ಬಿಜೆಪಿಯವರು ಗುತ್ತಿಗೆದಾರರ ಮೂಲಕ ಕಮಿಷನ್‌ ಆರೋಪ ಮಾಡುತ್ತಿದ್ದಾರೆ. ಬಿಬಿಎಂಪಿ ಕಚೇರಿಯಲ್ಲಿನ ಪ್ರಯೋಗಾಲಯದಲ್ಲಿನ ಅಗ್ನಿ ದುರಂತಕ್ಕೆ ಬಿಜೆಪಿ ನಾಯಕರೇ ಕಾರಣ. ಕಾಂಗ್ರೆಸ್‌ ಸರ್ಕಾರದ ಜನಪ್ರಿಯತೆ ಸಹಿಸದೇ ಹೀಗೆ ಷಡ್ಯಂತ್ರ ರೂಪಿಸುತ್ತಿದ್ದಾರೆ’ ಎಂದರು.

‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳಾಗಿದೆ. ಕಳೆದ ಮೂರು ವರ್ಷಗಳಿಂದ ಬಿಬಿಎಂಪಿ ಗುತ್ತಿಗೆದಾರರಿಗೆ ಏಕೆ ಹಣ ಬಿಡುಗಡೆಯಾಗಿಲ್ಲ? ಕೆಲ ಗುತ್ತಿಗೆದಾರರು ರಾಜಕೀಯ ಪಕ್ಷಗಳ ನಾಯಕರ ಕೈಗೊಂಬೆಗಳಾಗಿ ವರ್ತಿಸುತ್ತಿದ್ದಾರೆ’ ಎಂದು ಆಪಾದಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.