ಸಾಂದರ್ಭಿಕ ಚಿತ್ರ
ಬೆಂಗಳೂರು: ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪದ ಅಡಿ ಲೇಖಕಿ ಹಾಗೂ ಅವರ ಪುತ್ರನ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪಿಎಸ್‌ಐಯೊಬ್ಬರು ನೀಡಿದ ದೂರಿನ ಮೇರೆಗೆ ಉಲ್ಲಾಳ ಮುಖ್ಯರಸ್ತೆಯ ನಂದನ ತೋಟದ ನಿವಾಸಿ ಲಕ್ಷ್ಮಿ ಜಿ. ಪ್ರಸಾದ್ ಹಾಗೂ ಅವರ ಪುತ್ರ ಅರವಿಂದ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.
ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ಲಕ್ಷ್ಮಿ ಜಿ.ಪ್ರಸಾದ್ ವಿರುದ್ಧ ನ್ಯಾಯಾಲಯವು ಬಂಧನ ವಾರಂಟ್ ಜಾರಿಗೊಳಿಸಿತ್ತು. ಕೋರ್ಟ್ ಸೂಚನೆ ಮೇರೆಗೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಹಿರಿಯ ಅಧಿಕಾರಿಗಳು, ಪಿಎಸ್‌ಐಗೆ ಸೂಚನೆ ನೀಡಿದ್ದರು.
ಅ.23ರಂದು ಲಕ್ಷ್ಮಿ ಜಿ.ಪ್ರಸಾದ್ ಅವರನ್ನು ಪಿಎಸ್‌ಐ ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ಆಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.