ಬೆಂಗಳೂರು: ಕೋಟ್ಯಂತರ ರೂಪಾಯಿ ವಂಚಿಸಿರುವ ಆರೋಪದಡಿ ಆನ್‌ಲೈನ್ ಪೋಕರ್ ಗೇಮಿಂಗ್ ಆ್ಯಪ್ವೊಂದರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ವ್ಯಕ್ತಿಯೊಬ್ಬರು ನೀಡಿರುವ ದೂರಿನನ್ವಯ ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
‘ಆನ್‌ಲೈನ್ ಪೋಕರ್ ಗೇಮಿಂಗ್ ಆ್ಯಪ್‌ನಲ್ಲಿ ಸಣ್ಣ ಪ್ರಮಾಣದ ಹಣದಲ್ಲಿ ಆಟವಾಡಿದಾಗ ಗೆಲ್ಲಲು ಅನುವು ಮಾಡಿಕೊಡಲಾಗುತ್ತಿದೆ. ಆದರೆ ದೊಡ್ಡ ಮೊತ್ತವನ್ನು ಹೂಡಿಕೆ ಮಾಡಿದಾಗ ಸೋಲಿಸಲಾಗುತ್ತಿದೆ. ಇದರಿಂದ ಅನುಮಾನಗೊಂಡು ನಾವು ಆಟವಾಡಿದ ಟೇಬಲ್‌ನ ಮಾಹಿತಿ ಕೇಳಿದರೆ ನೀಡುವುದಿಲ್ಲ. ಆ್ಯಪ್‌ನಲ್ಲಿ ಸಾಕಷ್ಟು ಲೋಪಗಳಿದ್ದು, ಹೂಡಿಕೆ ಮಾಡುವ ಹಣಕ್ಕೆ ಯಾವುದೇ ಭದ್ರತೆಯಿಲ್ಲ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
₹ 3 ಕೋಟಿಗೂ ಅಧಿಕ ಹಣ ವಂಚಿಸಲಾಗಿದೆ. ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.