ADVERTISEMENT

ಬಿಡಿಎ ನೌಕರರ ಸಂಘಕ್ಕೆ ಜಾಗ ಮಂಜೂರು ಅಕ್ರಮ: ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 21:07 IST
Last Updated 16 ಏಪ್ರಿಲ್ 2021, 21:07 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಬಿಡಿಎ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ 33 ಎಕರೆ 2 ಗುಂಟೆ ಜಾಗ ಮಂಜೂರು ಮಾಡಿರವುದು ಅಕ್ರಮ ಎಂದು ಹೈಕೋರ್ಟ್ ಹೇಳಿದೆ.

ಬಿ.ವಿ. ಶಿವಸ್ವಾಮಿ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ಬೆಂಗಳೂರು ದಕ್ಷಿಣ ತಾಲ್ಲೂಕಿನ ದೊಡ್ಡಕಲ್ಲಸಂದ್ರ ಗ್ರಾಮದಲ್ಲಿ ಸಂಘಕ್ಕೆ2006ರ ನವೆಂಬರ್‌ನಲ್ಲಿ ಭೂಮಿ ನೀಡಲಾಗಿದೆ. ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆಯದೆ ಇರುವುದು ಕಾನೂನಿನ ಉಲ್ಲಂಘನೆ’ ಎಂದು ಅರ್ಜಿದಾರರು ದೂರಿದ್ದಾರೆ.

ADVERTISEMENT

ಐದು ಎಕರೆಗಿಂತ ಹೆಚ್ಚಿನ ಭೂಮಿಯನ್ನು ಯಾವುದೇ ಸಂಘ ಅಥವಾ ಸಂಸ್ಥೆಗೆ ನೀಡಬೇಕೆಂದರೆ ಅದಕ್ಕೆ ಸರ್ಕಾರದ ಪೂರ್ವಾನುಮತಿ ಅಗತ್ಯ ಎಂದು ಪೀಠ ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.