ADVERTISEMENT

ಆಲೂರು: ಶಾಂತಿಯುತ ಮತದಾನ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2021, 18:59 IST
Last Updated 29 ಮಾರ್ಚ್ 2021, 18:59 IST

ಹೆಸರಘಟ್ಟ: ಆಲೂರು ಗ್ರಾಮ ಪಂಚಾಯಿತಿಯ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು ಶೇಕಡ 75.94ರಷ್ಟು ಮತದಾನವಾಗಿದೆ. ಸೋಮವಾರ ಬೆಳಿಗ್ಗೆಯಿಂದಲೇ ಮತದಾರರು ಮತ ಕೇಂದ್ರಗಳತ್ತ ಧಾವಿಸಿದರು.

ಹೆಗ್ಗಡದೇವನಪುರ ಗ್ರಾಮದಲ್ಲಿ ಮೂರು, ಆಲೂರು ಮತ್ತು ತಮ್ಮೇನಹಳ್ಳಿ ಗ್ರಾಮದಲ್ಲಿ ತಲಾ ಎರಡು ಮತಕೇಂದ್ರಗಳನ್ನು ತೆರೆಯಲಾಗಿತ್ತು. ಒಟ್ಟು ಏಳು ಮತ ಕೇಂದ್ರಗಳಲ್ಲಿ ಗ್ರಾಮಸ್ಥರು ಶಾಂತಿಯುತವಾಗಿ ಮತ ಚಲಾವಣೆ ಮಾಡಿದರು.

ಇದೇ 31 ರಂದು ಬೆಳಿಗ್ಗೆ 8ರಿಂದ ಮಾದನಾಯಕನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಎಣಿಕೆಯಾಗಲಿದ್ದು 33 ಅಭ್ಯರ್ಥಿಗಳ ಫಲಿತಾಂಶ ಹೊರಬೀಳಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.