
ಬೆಂಗಳೂರು: ಮಾಗಡಿ ರೋಡ್‌ನ ನೈಸ್ ರಸ್ತೆಯ ಜಂಕ್ಷನ್ ಬಳಿ, ಬುಧವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಅಮೆಜಾನ್ ಕಂಪನಿಯ ವ್ಯವಸ್ಥಾಪಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಎಚ್‌ಎಸ್‌ಆರ್ ಲೇಔಟ್‌ನ ನಿವಾಸಿ ಸಂತೋಷ್ (35) ಮೃತಪಟ್ಟವರು.
‘ಹಲವು ವರ್ಷಗಳಿಂದ ಅಮೆಜಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಿದ್ದ ಅವರು, ಬುಧವಾರ ಮುಂಜಾನೆ ಮನೆಗೆ ಕಾರಿನಲ್ಲಿ ಹೊರಟಿದ್ದರು. ಮುಂಜಾನೆ ಮಂಜು ಮುಸುಕಿದ ವಾತಾವರಣದಲ್ಲಿ ತೆರಳುತ್ತಿದ್ದರು. ಜಂಕ್ಷನ್‌ನಲ್ಲಿ ನಿಂತಿದ್ದ ಲಾರಿ ಕಾಣದೇ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರನ್ನು ಚಾಲಕ ಅತಿವೇಗವಾಗಿ ಚಲಾಯಿಸುತ್ತಿದ್ದರು’ ಎಂದು ಪೊಲೀಸರು ಹೇಳಿದರು.
ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.