
ಕೆ.ಆರ್.ಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಿಸುವಂತೆ ಒತ್ತಾಯಿಸಿ ಭೀಮ್ ಪ್ರಜಾ ಸಂಘದ ನೇತೃತ್ವದಲ್ಲಿ ಕೋಲಾರದಿಂದ ಬೆಂಗಳೂರುವರೆಗಿನ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ಹೊಸಕೋಟೆ ಟೋಲ್ ಬಳಿ ಪೊಲೀಸರು ತಡೆದು, ನೂರಾರು ಪ್ರತಿಭಟನಕಾರರನ್ನು ವಶಕ್ಕೆ ಪಡೆದರು.
‘ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಸ್ವಾಭಿಮಾನಿಗಳ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಆದರೆ, ಪೋಲಿಸರು ಏಕಾಏಕಿ ತಡೆದು ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ವೈಟ್‌ಫೀಲ್ಡ್ ಮುರುಗೇಶ್ ಆಕ್ರೋಶ ವ್ಯಕ್ತಪಡಿಸಿದರು.
‘ಸಚಿವ ಮಹಾದೇವಪ್ಪ ಅವರು ನಾಲ್ಕು ತಿಂಗಳಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಿಸುವ ಕಾರ್ಯ ಮಾಡಲಾಗುವುದು ಎಂದು ಆಶ್ವಾಸನೆ ನೀಡಿದ್ದರು. ಆದರೆ, ಇಲ್ಲಿಯವರೆಗೆ ಪ್ರತಿಮೆ ನಿರ್ಮಿಸಲು ಮುಂದಾಗಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.