ಬಿಬಿಎಂಪಿ
ಬೆಂಗಳೂರು: ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಿಸುತ್ತಿದ್ದು, ಬಿ.ಆರ್. ಅಂಬೇಡ್ಕರ್ ಸಮಾಜಸೇವಾ ರತ್ನ, ಬಿ.ಆರ್. ಅಂಬೇಡ್ಕರ್ ರತ್ನ ಮತ್ತು ಬಿ.ಆರ್. ಅಂಬೇಡ್ಕರ್ ಭೂಷಣ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದೆ.
ನಗರದ ಪುರಭವನದಲ್ಲಿ ಏಪ್ರಿಲ್ 15ರಂದು ನಡೆಯುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ, ಸಾಧಕ, ಸಾಧಕಿಯರು, ಮತ್ತು ಬಿಬಿಎಂಪಿ ಅಧಿಕಾರಿ, ನೌಕರರಿಗೆ ಅಂಬೇಡ್ಕರ್ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಘದ ಅಧ್ಯಕ್ಷ ಎ. ಅಮೃತ್‌ರಾಜ್ ಮಾಹಿತಿ ನೀಡಿದರು.
ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದಿಕ್ಷೀತ್, ನ್ಯಾಯಮೂರ್ತಿ ಆರ್. ದೇವದಾಸ್ ಮತ್ತು ಶಿಕ್ಷಣ ತಜ್ಞ ವೂಡೇ ಪಿ.ಕೃಷ್ಣ ಭಾಗವಹಿಸಲಿದ್ದಾರೆ. ಜನಪದ ಗಾಯಕ ಗುರುರಾಜ್ ಹೊಸಕೋಟೆ ಮತ್ತು ತಂಡದವರಿಂದ ಸಂಗೀತ ಸಂಜೆ ಏರ್ಪಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.