ADVERTISEMENT

ಮಹಿಳೆಯರಿಗೆ ಹಕ್ಕು ತಂದುಕೊಟ್ಟ ಅಂಬೇಡ್ಕರ್‌: ಮಹದೇವಪ್ಪ

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 20:50 IST
Last Updated 18 ಜೂನ್ 2025, 20:50 IST
ಆರೋಗ್ಯ ಶಿಬಿರದಲ್ಲಿ ಎಚ್.ಸಿ. ಮಹದೇವಪ್ಪ ಮಾತನಾಡಿದರು
ಆರೋಗ್ಯ ಶಿಬಿರದಲ್ಲಿ ಎಚ್.ಸಿ. ಮಹದೇವಪ್ಪ ಮಾತನಾಡಿದರು   

ಬೆಂಗಳೂರು: ಭಾರತದ ಇತಿಹಾಸದಲ್ಲಿ ಹಿಂದೂ ಕೋಡ್ ಬಿಲ್ ಮೂಲಕ ಶಾಸನ ಬದ್ಧವಾಗಿ ಮಹಿಳೆಯರಿಗೆ ಹಕ್ಕುಗಳನ್ನು ನೀಡಲು ಮುಂದಾದ ಮೊದಲ ವ್ಯಕ್ತಿ ಅಂಬೇಡ್ಕರ್‌ ಎಂದು ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ತಿಳಿಸಿದರು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಎಫ್‌ಐಸಿಸಿಐ ಫ್ಲೊ ಸಹಯೋಗದಲ್ಲಿ ಮಹಿಳೆಯರಿಗಾಗಿ ಹಮ್ಮಿಕೊಂಡಿದ್ದ ಆರೋಗ್ಯ ಶಿಬಿರದಲ್ಲಿ ಅವರು ಮಾತನಾಡಿದರು.

ಆರೋಗ್ಯವು ಎಲ್ಲ ಸಂಗತಿಗಳಿಗಿಂತ ಮಿಗಿಲಾದ ವಿಚಾರ. ಮಹಿಳೆಯರಿಗೆ ಮುಟ್ಟಿನ ಕಪ್‌ಗಳನ್ನು ವಿತರಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಉತ್ತಮ ಕಾರ್ಯ ಎಂದು ಶ್ಲಾಘಿಸಿದರು.

ADVERTISEMENT

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯ ನಿರ್ವಾಹಕ ನಿರ್ದೇಶಕ ಕಾಂತರಾಜು ಮತ್ತು ಎಫ್‌ಐಸಿಸಿಐ ಫ್ಲೊ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.