ADVERTISEMENT

ಸಾಮಾಜಿಕ ಸಮಾನತೆಗಾಗಿ ಅಂಬೇಡ್ಕರ್‌ ಆದರ್ಶ ಪಾಲಿಸಿ: ಎಸ್‌.ಸಚ್ಚಿದಾನಂದ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 11:48 IST
Last Updated 21 ಏಪ್ರಿಲ್ 2021, 11:48 IST

ಬೆಂಗಳೂರು: ‘ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್‌ ಮಾನವತಾವಾದಿ. ಸಮ ಸಮಾಜದ ಕಲ್ಪನೆ ಸಾಕಾರಗೊಳ್ಳಬೇಕಾದರೆ ನಾವೆಲ್ಲ ಅವರ ಆದರ್ಶಗಳನ್ನು ಪಾಲಿಸಬೇಕು’ ಎಂದು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಸ್‌.ಸಚ್ಚಿದಾನಂದ ಹೇಳಿದರು.

ವಿಶ್ವವಿದ್ಯಾಲಯವು ಬುಧವಾರ ಆಯೋಜಿಸಿದ್ದ ಅಂಬೇಡ್ಕರ್‌ ಅವರ 130ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅಂಬೇಡ್ಕರ್‌ ಶೋಷಿತ ಸಮುದಾಯದ ಧನಿಯಾಗಿದ್ದರು. ಅವರ ಏಳಿಗೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು. ಅವರ ಕೆಲಸಗಳು ನಮ್ಮೆಲ್ಲರಿಗೂ ಆದರ್ಶ. ನಾವೆಲ್ಲ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಭಾವನೆಗಳನ್ನು ಎತ್ತಿಹಿಡಿಯಬೇಕು. ಜೊತೆಗೆ ಅವುಗಳನ್ನು ಮೈಗೂಡಿಸಿಕೊಳ್ಳಬೇಕು. ಹಾಗಾದಾಗ ಮಾತ್ರ ಅಂಬೇಡ್ಕರ್‌ ಕಂಡ ಪ್ರಜಾಪ್ರಭುತ್ವದ ಕನಸು ನನಸಾಗಿಸಲು ಸಾಧ್ಯ’ ಎಂದರು.

ADVERTISEMENT

ವಿಶ್ವವಿದ್ಯಾಲಯದ ಕುಲಸಚಿವ ಎನ್‌.ರಾಮಕೃಷ್ಣರೆಡ್ಡಿ, ಹಣಕಾಸು ಅಧಿಕಾರಿ ಮಂಜುನಾಥ್‌ ಹೆಗಡೆ ಹಾಗೂ ಉಪ ಕುಲಸಚಿವ ಬಿ.ವಸಂತ ಶೆಟ್ಟಿ ಅವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.