ದಾಬಸ್ ಪೇಟೆ: ಸೋಂಪುರ ಹೋಬಳಿಯಾದ್ಯಂತ ಸೋಮವಾರ ಸರ್ಕಾರಿ ಕಚೇರಿಗಳು ಹಾಗೂ ವಿವಿಧ ಗ್ರಾಮಗಳಲ್ಲಿ ಡಾ.ಬಿ.ಆರ್.ಅಂಬೆಡ್ಕರ್ ಅವರ 134ನೇ ಹಾಗೂ ಬಾಬು ಜಗಜೀವನ ರಾಂರವರ ಜನ್ಮದಿನವನ್ನು ಆಚರಿಸಲಾಯಿತು.
ದಾಬಸ್ ಪೇಟೆ ಪಟ್ಟಣದ ಉದ್ದಾನೇಶ್ವರ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಏರ್ಪಡಿಸಿದ್ದ ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಂ ಜಯಂತಿಯಲ್ಲಿ ಭಾಗವಹಿಸಿದ್ದ ದಾಬಸ್‌ಪೇಟೆ ಪೊಲೀಸ್‌ಠಾಣೆ ಇನ್‌ಸ್ಪೆಕ್ಟರ್ ಬಿ.ರಾಜು ಮಾತನಾಡಿ, ‘ಅಂಬೇಡ್ಕರ್ ಒಂದು ಸಮುದಾಯಕ್ಕೆ ಮೀಸಲಾದವರಲ್ಲ. ಅವರು ಭಾರತದ ಸರ್ವ ಜನಾಂಗದ ಮಾಹನಾಯಕ’ ಎಂದು ತಿಳಿಸಿದರು.
‘ಜಗಜೀವನ್ ರಾಂರವರು ಮಾಡಿದ ಹಸಿರು ಕ್ರಾಂತಿ ದೇಶದ ಅಭಿವೃದ್ಧಿಯ ದಿಕ್ಕು ಬದಲಿಸಿತು. ಇವರಿಬ್ಬರು ಈ ದೇಶಕ್ಕೆ ನೀಡಿರುವ ಕೊಡುಗೆ ಅನನ್ಯ’ ಎಂದು ತಿಳಿಸಿದರು.
ದಲಿತ ಮುಖಂಡ ಎನ್.ಕೆ.ರಾಜು, ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಬಿ.ಕಾಂತರಾಜು, ಮಾಜಿ ತಾ.ಪಂ. ಸದಸ್ಯ ಪ್ರಕಾಶ್, ಮುಖಂಡರಾದ ಹನುಮಂತರಾಜು ಮಾತನಾಡಿದರು.
ಸೋಂಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಆನಂದ ಕುಮಾರ, ಉಪಾಧ್ಯಕ್ಷೆ ಚಿಕ್ಕಮ್ಮ ಮಂಜುನಾಥ, ಪಂಚಾಯಿತಿ ಸದಸ್ಯರು, ಡಿಎಸ್ಎಸ್ ಪದಾಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.