ADVERTISEMENT

ಹೆಬ್ಬಾಳ: ಅಂಬೇಡ್ಕರ್ ಜಯಂತಿ

​ಪ್ರಜಾವಾಣಿ ವಾರ್ತೆ
Published 12 ಜುಲೈ 2019, 19:29 IST
Last Updated 12 ಜುಲೈ 2019, 19:29 IST
ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ ನಿವೃತ್ತ ಕುಲಸಚಿವ ಡಾ.ಎಚ್.ಆರ್.ವಿ.ರೆಡ್ಡಿ ಅವರನ್ನು ಸನ್ಮಾನಿಸಲಾಯಿತು
ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ ನಿವೃತ್ತ ಕುಲಸಚಿವ ಡಾ.ಎಚ್.ಆರ್.ವಿ.ರೆಡ್ಡಿ ಅವರನ್ನು ಸನ್ಮಾನಿಸಲಾಯಿತು   

ಯಲಹಂಕ: ‘ದೀನದಲಿತರಿಗೆ ಸೇರಿದ ಹಲವಾರು ಮಹಾಪುರುಷರು ಮಹಾನ್ ಗ್ರಂಥಗಳನ್ನು ರಚಿಸುವ ಮೂಲಕ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ಎಚ್.ಡಿ.ನಾರಾಯಣಸ್ವಾಮಿ ಹೇಳಿದರು.

ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಮತ್ತು ಪಂಗಡ ಬೋಧಕೇತರ ನೌಕರರ ಸಂಘದ ಆಶ್ರಯದಲ್ಲಿ ಹೆಬ್ಬಾಳದ ಹೈನುವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ಅಂಬೇಡ್ಕರ್‌ ಅವರ 128ನೇ ಜಯಂತಿ ಸಮಾರಂಭದಲ್ಲಿ ಮಾತನಾಡಿದರು.

ಪ್ರಜಾವಿಮೋಚನಾ ಚಳವಳಿ (ಸ್ವಾಭಿಮಾನ) ರಾಜ್ಯ ಘಟಕದ ಅಧ್ಯಕ್ಷ ಮುನಿ ಆಂಜಿನಪ್ಪ ಮಾತನಾಡಿದರು.

ADVERTISEMENT

ಶಾಸಕ ಬೈರತಿ ಸುರೇಶ್, ಬಿಬಿಎಂಪಿ ಸದಸ್ಯ ಎಂ.ಆನಂದಕುಮಾರ್, ಪರಿಶಿಷ್ಟ ಜಾತಿ ಮತ್ತು ಪಂಗಡ ಬೋಧಕೇತರ ನೌಕರರ ಸಂಘದ ಪದಾಧಿಕಾರಿಗಳಾದ ಕೆ.ಎಲ್.ಸುರೇಶ್, ರಾಮಪ್ಪ ಎಚ್.ಕೊರವಾರ್, ಎನ್.ಎಂ.ಶ್ರೀನಿವಾಸಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.