ADVERTISEMENT

ಅಂಬೇಡ್ಕರ್ ಪ್ರತಿಮೆ ನಿರ್ಮಾಣ; ಭೂಮಿ ಪೂಜೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2022, 20:49 IST
Last Updated 15 ಏಪ್ರಿಲ್ 2022, 20:49 IST
ಯಲಹಂಕ ಮಿನಿ ವಿಧಾನಸೌಧ ಮುಂಭಾಗ ಅಂಬೇಡ್ಕರ್‌ ಪ್ರತಿಮೆ ಸ್ಥಾಪಿಸುವ ಕಾಮಗಾರಿಗೆ ಶಾಸಕ ಎಸ್.ಆರ್.ವಿಶ್ವನಾಥ್ ಭೂಮಿ ಪೂಜೆ ನೆರವೇರಿಸಿದರು. ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ಪಾಲಿಕೆ ಮಾಜಿ ಸದಸ್ಯ ಎಂ. ಸತೀಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ, ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಎನ್. ನಾಗರಾಜ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಜಯಕುಮಾರ್ ಇದ್ದರು.

ಯಲಹಂಕ: ಮಿನಿ ವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕಂಚಿನಪ್ರತಿಮೆ ಸ್ಥಾಪಿಸುವ ಕಾಮಗಾರಿಗೆ ಶಾಸಕ ಎಸ್.ಆರ್. ವಿಶ್ವನಾಥ್ ಭೂಮಿ ಪೂಜೆ ನೆರವೇರಿಸಿದರು.

‘ಮಿನಿ ವಿಧಾನಸೌಧದ ಮುಂಭಾಗದಲ್ಲಿ ಅಂಬೇಡ್ಕರ್‌ ಪ್ರತಿಮೆ ನಿರ್ಮಾಣವಾಗಬೇಕೆಂಬ ದಲಿತ ಮುಖಂಡರ ಹಲವು ವರ್ಷಗಳ ಬೇಡಿಕೆಯಂತೆ 14 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲು ಸರ್ಕಾರ ಅನುಮತಿ ನೀಡಿದೆ. ಇದಕ್ಕಾಗಿ ಒಟ್ಟು ₹1.60 ಕೋಟಿ ಅನುದಾನ ಬಿಡುಗಡೆ ಮಾಡಿದೆ’ ಎಂದು ವಿಶ್ವನಾಥ್ ತಿಳಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT