ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ
ಪಿಟಿಐ ಚಿತ್ರ
ಯಲಹಂಕ: ಮಿನಿ ವಿಧಾನಸೌಧದ ಮುಂಭಾಗದಲ್ಲಿ ಸ್ಥಾಪಿಸಿರುವ ಅಂಬೇಡ್ಕರ್ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 3ರಂದು ಉದ್ಘಾಟಿಸಲಿದ್ದಾರೆ.
ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಸ್ಥಾಪಿಸಬೇಕೆಂದು ಒತ್ತಾಯಿಸಿ, ದಲಿತಪರ ಸಂಘನೆಗಳು ನಡೆಸಿದ ಹೋರಾಟದ ಫಲವಾಗಿ ಸಮಾಜಕಲ್ಯಾಣ ಇಲಾಖೆ ವತಿಯಿಂದ ₹1.6 ಕೋಟಿ ಅನುದಾನ ಬಿಡುಗಡೆ ಮಾಡಲಾಯಿತು. ಎರಡು ವರ್ಷದ ಹಿಂದೆ 14 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು.
ಶಾಸಕ ಎಸ್.ಆರ್.ವಿಶ್ವನಾಥ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಯಲಹಂಕ ಮತ್ತು ಬ್ಯಾಟರಾಯನಪುರ ಕ್ಷೇತ್ರವ್ಯಾಪ್ತಿಯ ದಲಿತ ಮುಖಂಡರು ಹಾಗೂ ಯಲಹಂಕ ತಾಲ್ಲೂಕು ಆಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾರ್ಯಕ್ರಮದ ಕುರಿತು ಸುಧೀರ್ಘವಾಗಿ ಚರ್ಚೆ ನಡೆಸಿದರು.
ತಹಶೀಲ್ದಾರ್ ಶ್ರೇಯಸ್.ಜಿ.ಎಸ್, ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹರೀಶ್, ಬಿಬಿಎಂಪಿ ಕಾರ್ಯಪಾಲಕ ಎಂಜಿನಿಯರ್ ಸುಧಾಕರರೆಡ್ಡಿ, ಮುಖಂಡರಾದ ಬಿ.ಆರ್.ಮುನಿರಾಜು, ಜಿ.ಗುರುಸ್ವಾಮಿ, ಡಿ.ವಿ.ವೀರಭದ್ರೇಗೌಡ, ಲಿಂಗನಹಳ್ಳಿ ವೆಂಕಟೇಶ್, ಆವಲಹಳ್ಳಿ ಮಾರುತಿ, ಎಸ್.ಸೋಮ ಶೇಖರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.