ADVERTISEMENT

108-ಆರೋಗ್ಯ ಕವಚ’ ಯೋಜನೆಯ ಆಂಬುಲೆನ್ಸ್‌ ನಿರ್ವಹಣೆ: ಅವ್ಯವಹಾರದ ಬಗ್ಗೆ ತನಿಖೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2025, 23:36 IST
Last Updated 4 ಆಗಸ್ಟ್ 2025, 23:36 IST
ಆಂಬುಲೆನ್ಸ್‌ (ಸಾಂದರ್ಭಿಕ ಚಿತ್ರ)
ಆಂಬುಲೆನ್ಸ್‌ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ‘108-ಆರೋಗ್ಯ ಕವಚ’ ಯೋಜನೆಯ ಆಂಬುಲೆನ್ಸ್‌ಗಳ ನಿರ್ವಹಣೆಯಲ್ಲಿ ನ್ಯೂನತೆ ಹಾಗೂ ಅವ್ಯವಹಾರಗಳು ನಡೆದಿರುವ ಕುರಿತು ದೂರುಗಳು ಬಂದಿದ್ದು, ಈ ಬಗ್ಗೆ ತನಿಖೆ ನಡೆಸಿ, 15 ದಿನಗಳಲ್ಲಿ ವರದಿ ನೀಡುವಂತೆ ಆರೋಗ್ಯ ಇಲಾಖೆಯು ವಿಭಾಗೀಯ ಸಹ ನಿರ್ದೇಶಕರಿಗೆ ಸೂಚಿಸಲಾಗಿದೆ.

ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳ ವ್ಯಾಪ್ತಿಯಲ್ಲಿ, ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು, ತಾಲ್ಲೂಕು ಆರೋಗ್ಯ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ಆಂಬುಲೆನ್ಸ್‌ನ ಪಿ.ಸಿ.ಆರ್, ಪಿ.ಡಿ.ಆರ್, ಹಾಜರಾತಿ ವಹಿ, ಲಾಗ್‌ ಪುಸ್ತಕಗಳನ್ನು ಪರಿಶೀಲಿಸಬೇಕು. ಆಂಬುಲೆನ್ಸ್‌ನಲ್ಲಿರುವ ನ್ಯೂನತೆಗಳು ಹಾಗೂ ಅವ್ಯವಹಾರದ ಕುರಿತು ತನಿಖೆ ನಡೆಸಿ, ವರದಿ ನೀಡಬೇಕು ಎಂದು ಆರೋಗ್ಯ ಇಲಾಖೆಯ ಆಯುಕ್ತರು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT