ADVERTISEMENT

ಸೋಂಕಿತರ ಆಂಬುಲೆನ್ಸ್‌ಗಳಿಗೆ ಪೊಲೀಸರ ದಾರಿ

​ಪ್ರಜಾವಾಣಿ ವಾರ್ತೆ
Published 8 ಜುಲೈ 2020, 8:51 IST
Last Updated 8 ಜುಲೈ 2020, 8:51 IST

ಬೆಂಗಳೂರು: ಕೊರೊನಾ ಸೋಂಕಿತರನ್ನು ಕರೆದೊಯ್ಯುವ ಆಂಬುಲೆನ್ಸ್‌ಗಳ ಸಂಚಾರಕ್ಕೆ ‘ಸಿಗ್ನಲ್ ಮುಕ್ತ’ ದಾರಿ ಮಾಡಿಕೊಡಲು ನಗರದ ಪೊಲೀಸರು ಸಿದ್ಧವಾಗಿದ್ದು, ಅಗತ್ಯವಿರುವವರು ನಿಯಂತ್ರಣ ಕೊಠಡಿ ಸಂಪರ್ಕಿಸುವಂತೆ ಅಧಿಕಾರಿಗಳು ಕೋರಿದ್ದಾರೆ.

ಲಾಕ್‌ಡೌನ್ ಸಡಿಲಿಕೆ ನಂತರ ನಗರದಲ್ಲಿ ವಾಹನಗಳ ಓಡಾಟ ಹೆಚ್ಚಾಗಿದೆ. ಜೊತೆಗೆ, ಕೊರೊನಾ ಪ್ರಕರಣಗಳ ಸಂಖ್ಯೆಯೇ ಏರುತ್ತಿದೆ. ಇಂಥ ಸಂದರ್ಭದಲ್ಲಿ ಸೋಂಕಿತರನ್ನು ಕರೆದೊಯ್ಯುವ ಆಂಬುಲೆನ್ಸ್‌ಗಳು ಕೆಲವೆಡೆ ದಟ್ಟಣೆಯಲ್ಲಿ ಸಿಲುಕುತ್ತಿವೆ. ಸೋಂಕಿತರು ಆಸ್ಪತ್ರೆ ತಲುಪುವುದು ತಡವಾಗುತ್ತಿದೆ.

ಇಂಥ ದಟ್ಟಣೆ ಸಂದರ್ಭದಲ್ಲಿ ಆಂಬುಲೆನ್ಸ್‌ಗಳ ಸಂಚಾರಕ್ಕೆ ಅನುಕೂಲ ಮಾಡಿಕೊಡುವುದಾಗಿ ಪೊಲೀಸರು ಹೇಳಿದ್ದಾರೆ.

ADVERTISEMENT

‘ಸರ್ಕಾರಿ ಅಥವಾ ಖಾಸಗಿ ಆಂಬುಲೆನ್ಸ್‌ಗಳ ತ್ವರಿತ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ನಾವು ಸಿದ್ಧರಾಗಿದ್ದೇವೆ. ಆಂಬುಲೆನ್ಸ್‌ಗಳ ಬಗ್ಗೆ ಮಾಹಿತಿ ನೀಡಿದರೆ ತುರ್ತಾಗಿ ಸ್ಪಂದಿಸಿ ರಸ್ತೆಯುದ್ದಕ್ಕೂ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಿದ್ದೇವೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ನಿಯಂತ್ರಣ ಕೊಠಡಿ–100, 080–22943131, 22943030, 22943663 ಸಂಪರ್ಕಿಸಬಹುದು’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.