ADVERTISEMENT

ಕಾರ್ಮಿಕ ಕಾಯ್ದೆ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

300 ಕಾರ್ಮಿಕರಿದ್ದರೆ ಮಾತ್ರ ಕಾಯ್ದೆ ವ್ಯಾಪ್ತಿಗೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2020, 19:42 IST
Last Updated 1 ಆಗಸ್ಟ್ 2020, 19:42 IST

ಬೆಂಗಳೂರು: ಕಾರ್ಮಿಕರ ಹಿತ ರಕ್ಷಿಸುವ ಕಾಯ್ದೆಗಳ ತಿದ್ದುಪಡಿಗಾಗಿ ರಾಜ್ಯ ಸರ್ಕಾರ ತಂದಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತಿದ್ದುಪಡಿಗಳಿಗೆ ಅನುಮೋದನೆ ನೀಡಲಾಗಿತ್ತು.

ಹಿಂದೆ ಇದ್ದ ಕಾಯ್ದೆ ಪ್ರಕಾರ, ಯಾವುದೇ ಉದ್ಯಮ 100 ಅಥವಾ ಅದಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿದ್ದರೆ ಕೈಗಾರಿಕೆ ಮುಚ್ಚಲು, ಕಾರ್ಮಿಕರನ್ನು ಕೆಲಸದಿಂದ ತೆಗೆಯಲು ಸರ್ಕಾರದ ಅನುಮತಿ ಕಡ್ಡಾಯವಾಗಿತ್ತು. ಈಗ ತಿದ್ದುಪಡಿ ಮೂಲಕ ಸಂಖ್ಯೆಯನ್ನು 300ಕ್ಕೆ ಹೆಚ್ಚಿಸಲಾಗಿದೆ. ಇದಕ್ಕಿಂತ ಕಡಿಮೆ ಕಾರ್ಮಿಕರಿದ್ದರೆ ಅನುಮತಿ ಪಡೆಯಬೇಕಾಗಿಲ್ಲ.

ಗುತ್ತಿಗೆ ಮತ್ತು ಫ್ಯಾಕ್ಟರಿ ಕಾಯ್ದೆ ಅಡಿ ಕಾರ್ಮಿಕರನ್ನು ಹೆಚ್ಚಿಸಲು ಅವಕಾಶ ನೀಡಲಾಗಿದೆ. ಯಾವುದೇ ಉದ್ಯಮದಲ್ಲಿ ಕನಿಷ್ಠ 20 ಅಥವಾ ಅದಕ್ಕಿಂತ ಹೆಚ್ಚು ಗುತ್ತಿಗೆ ಕಾರ್ಮಿಕರಿದ್ದರೆ ಕಾಯ್ದೆಯ ಪ್ರಕಾರ ಉದ್ಯಮ ಸರ್ಕಾರದ ನಿಯಂತ್ರಣಕ್ಕೆ ಒಳಪಡುತ್ತಿತ್ತು. ಈಗ ಗುತ್ತಿಗೆ ಕಾರ್ಮಿಕರ ಕನಿಷ್ಠ ಸಂಖ್ಯೆಯನ್ನು 50ಕ್ಕೆ ಹೆಚ್ಚಿಸಲಾಗಿದೆ.

ADVERTISEMENT

ಈ ತಿದ್ದುಪಡಿಗೆ ಕಾರ್ಮಿಕ ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು. ಆದರೆ, ತಿದ್ದುಪಡಿ ಕ್ರಮದಿಂದ ಬಂಡವಾಳ ಹೂಡಿಕೆ ಹೆಚ್ಚಲಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.