ADVERTISEMENT

ಬೆಂಗಳೂರಿನಲ್ಲಿ ಅಮೆರಿಕ ವೀಸಾ ಕಚೇರಿ ಬೇಕು– ಸಿಎಂ ಬೊಮ್ಮಾಯಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2023, 6:47 IST
Last Updated 15 ಫೆಬ್ರುವರಿ 2023, 6:47 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ    

ಬೆಂಗಳೂರು: ‘‌ಬೆಂಗಳೂರಿನಲ್ಲಿ ಅಮೆರಿಕ ವೀಸಾ ಕಚೇರಿ ತೆರೆಯುವ ಅಗತ್ಯವಿದೆ’ ಎಂದು ತಮ್ಮನ್ನು ಭೇಟಿಯಾದ ಭಾರತದಲ್ಲಿರುವ ಅಮೆರಿಕದ ರಾಯಭಾರಿ ಎಲಿಜೆಬೆತ್ ಜೋನ್ಸ್ ಮತ್ತು ಚೆನ್ನೈನಲ್ಲಿರುವ ಕಾನ್ಸುಲ್ ಜನರಲ್ ಜೂಡಿತ್ ರೇವಿನ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

‘ಪ್ರಸ್ತುತ ವೀಸಾ ಕಚೇರಿ ಚೆನ್ನೈನಲ್ಲಿ ಇರುವುದರಿಂದ ಬೆಂಗಳೂರಿನಿಂದ ಅಮೆರಿಕಕ್ಕೆ ಪ್ರಯಾಣಿಸುವವರಿಗೆ ತೊಂದರೆಯಾಗುತ್ತಿದೆ. ಪ್ರತಿನಿತ್ಯ ವಿದೇಶಿಗರು ಸೇರಿದಂತೆ ಐದು ಸಾವಿರಕ್ಕೂ ಹೆಚ್ಚು ಜನ ಅಮೆರಿಕಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ. ಹೀಗಾಗಿ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಆಗ್ರಹಿಸಿದರು.

‘ಜಾಗತಿಕ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್ ಕರ್ನಾಟಕ’ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದ ಹಲವು ಸಮಾವೇಶ ಹಾಗೂ ವಿಚಾರಸಂಕಿರಣಗಳು ಬೆಂಗಳೂರಿನಲ್ಲಿ ನಡೆಯುತ್ತಲೇ ಇರುತ್ತವೆ. ಅಮೆರಿಕದ ಸಂಸ್ಥೆಗಳಿಗೆ ಬೆಂಗಳೂರಿನಲ್ಲಿರುವ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡುತ್ತಿದೆ. ವಿದೇಶಿ ಬಂಡವಾಳ ಹೂಡಿಕೆ ರಾಜ್ಯದಲ್ಲಿ ಹೆಚ್ಚಾಗಿದೆ’ ಎಂದರು.

ADVERTISEMENT

ಎಲಿಜೆಬೆತ್ ಜೋನ್ಸ್ ಮಾತನಾಡಿ, ‘ಬೆಂಗಳೂರಿಗೆ ಇದು ನನ್ನ ಮೊದಲ ಭೇಟಿ. ಇಲ್ಲಿ 650ಕ್ಕೂ ಹೆಚ್ಚು ಅಮೆರಿಕನ್‌ ಕಂಪನಿಗಳಿವೆ. ಅವುಗಳಿಂದ ಅಮೆರಿಕ ಮತ್ತು ಭಾರತದಲ್ಲಿ ಲಕ್ಷಾಂತರ ಉದ್ಯೋಗ ಸೃಷ್ಟಿಯಾಗುತ್ತಿವೆ. ಅಮೆರಿಕ-ಭಾರತದ ವಾಣಿಜ್ಯ ಸಹಭಾಗಿತ್ವವನ್ನು ಮುನ್ನಡೆಸುವಲ್ಲಿ ಕರ್ನಾಟಕ ಮಹತ್ವದ ಪಾತ್ರವಹಿಸಿದ್ದು, ಈ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ಉತ್ಸುಕ
ರಾಗಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.