ADVERTISEMENT

ಅಮ್ರಿತ್‌ ಪೌಲ್‌ ಜಾಮೀನು ಅರ್ಜಿ ಮತ್ತೆ ವಜಾ

​ಪ್ರಜಾವಾಣಿ ವಾರ್ತೆ
Published 4 ಜನವರಿ 2023, 22:05 IST
Last Updated 4 ಜನವರಿ 2023, 22:05 IST
   

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿ, ಐಪಿಎಸ್‌ ಅಧಿಕಾರಿ ಅಮ್ರಿತ್‌ ಪೌಲ್‌ ಅವರ ಜಾಮೀನು ಅರ್ಜಿ ಮತ್ತೆ ವಜಾಗೊಂಡಿದೆ. 24ನೇ ಸಿಸಿಎಚ್ ನ್ಯಾಯಾಲಯವು ಬುಧವಾರ ಅರ್ಜಿ ವಜಾಗೊಳಿಸಿತು. ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲೂ ಈ ಹಿಂದೆ ಜಾಮೀನು ಅರ್ಜಿ ತಿರಸ್ಕಾರಗೊಂಡಿತ್ತು.

ಪೌಲ್‌ಗೆ ಜಾಮೀನು ನೀಡುವಂತೆ ವಕೀಲರು ಮಾಡಿದ್ದ ಮನವಿ
ಯನ್ನು ನ್ಯಾಯಾಧೀಶರು ತಿರಸ್ಕರಿಸಿದರು. ಭದ್ರತಾ ಕೊಠಡಿಯ ಬೀಗದ ಕೀಯನ್ನು ತನ್ನ ಕೈಕೆಳಗಿನ ನೌಕರರಿಗೆ ನೀಡಿ, ಉತ್ತರ ಪತ್ರಿಕೆ ತಿದ್ದಿಸಿರುವ ಕೃತ್ಯದಲ್ಲಿ ಪೌಲ್‌ ಭಾಗಿ ಆಗಿರುವುದು ತನಿಖೆಯಿಂದ ದೃಢಪಟ್ಟಿತ್ತು. ಸಿಐಡಿ ತಂಡವು ಅವರನ್ನು ಬಂಧಿಸಿ ವಿಚಾರಣೆ ನಡೆಸಿತ್ತು. ಅವರ ಮನೆಯ ಮೇಲೂ ತನಿಖಾ ತಂಡವು ದಾಳಿ ನಡೆಸಿ ದಾಖಲೆ ವಶಕ್ಕೆ ಪಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT