ADVERTISEMENT

ಅಮ್ರಿತ್‌ ಜಾಮೀನು ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2022, 18:27 IST
Last Updated 23 ನವೆಂಬರ್ 2022, 18:27 IST

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿಯೂ ಆಗಿರುವ ಐಪಿಎಸ್‌ ಅಧಿಕಾರಿ ಅಮ್ರಿತ್‌ ಪೌಲ್‌ ಅವರಿಗೆ ಜಾಮೀನು ನೀಡಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ಬುಧವಾರ ನಿರಾಕರಿಸಿದೆ.‌

ನ್ಯಾಯಾಧೀಶ ಲಕ್ಷ್ಮೀನಾರಾಯಣ ಭಟ್ ಅವರು ಪೌಲ್‌ ಜಾಮೀನು ಅರ್ಜಿ ವಜಾಗೊಳಿಸಿದರು.

‘ಆರೋಪಿಗೆ ಜಾಮೀನು ನೀಡಿದರೆ ಸಮಾಜಕ್ಕೆ ಕೆಟ್ಟ ಸಂದೇಶ ರವಾನಿಸಿದಂತಾಗಲಿದೆ’ ಎಂದು ಸರ್ಕಾರಿ ವಕೀಲ ಪಿ.ಪ್ರಸನ್ನ ಕುಮಾರ್‌ ವಾದ ಮಂಡಿಸಿದರು. ‘ನೇಮಕಾತಿ ಪರೀಕ್ಷೆಯ ಒಎಂಆರ್‌ ಪ್ರತಿಗಳನ್ನು ಇರಿಸಿದ್ದ ಭದ್ರತಾಕೊಠಡಿಯ ಕೀ ಅನ್ನು ಪೌಲ್‌ ಕೆಳಗಿನ ಅಧಿಕಾರಿಗಳಿಗೆ ಯಾಕೆ ನೀಡಿದ್ದರು ಎಂಬುದಕ್ಕೆ ಸ್ಪಷ್ಟ ವಿವರಣೆ ನೀಡಿಲ್ಲ. ಪೌಲ್‌ ಹಿರಿಯ ಐಪಿಎಸ್‌ ಅಧಿಕಾರಿ. ಜಾಮೀನು ಲಭಿಸಿದರೆ ಪ್ರಭಾವ ಬಳಸಿ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.