ADVERTISEMENT

ಅಮೂಲ್ಯ ಪ್ರಕರಣ ಎನ್‌ಐಎಗೆ ವಹಿಸಲು ಹೈಕೋರ್ಟ್ ನಕಾರ

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 21:16 IST
Last Updated 28 ಜುಲೈ 2020, 21:16 IST

ಬೆಂಗಳೂರು: ಸಿಎಎ ವಿರುದ್ಧದ ಪ್ರತಿಭಟನೆ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಅಮೂಲ್ಯ ಲಿಯೋನ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

‘ಎಫ್‌ಐಆರ್‌ನಲ್ಲಿ ಇರುವ ಆರೋಪಗಳ ಸ್ವರೂಪ ಗಮನಿಸಿದರೆ ಇದು ಎನ್‌ಐಎಗೆ ವಹಿಸಿಕೊಡಬೇಕಾದಷ್ಟು ಗಂಭೀರವಾದ ಪ್ರಕರಣ ಎಂದು ನಾವು ಭಾವಿಸುವುದಿಲ್ಲ. ಅಮೂಲ್ಯಗೆ ದೊರೆತಿರುವ ಜಾಮೀನು ರದ್ದುಗೊಳಿಸಬೇಕು ಎಂಬ ಮನವಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿತು.

‘ಪೊಲೀಸರು ನಿರ್ದಿಷ್ಟ ಅವಧಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸದ ಕಾರಣ ಆರೋಪಿಗೆ ಜಾಮೀನು ದೊರೆತಿದೆ. ಪೊಲೀಸರು ಸಮರ್ಪಕವಾಗಿ ತನಿಖೆ ನಡೆಸದ ಕಾರಣ ಪ್ರಕರಣವನ್ನು ಎನ್ಐಎಗೆ ವಹಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.