ADVERTISEMENT

ಸ್ವಾತಂತ್ರ್ಯೋತ್ಸವ: ನಿರೂಪಕರನ್ನು ಬದಲಿಸಿ: ರಂಗಭೂಮಿ ಕಲಾವಿದೆ ವಿ. ಗಿರಿಜಾ

​ಪ್ರಜಾವಾಣಿ ವಾರ್ತೆ
Published 31 ಜುಲೈ 2021, 19:31 IST
Last Updated 31 ಜುಲೈ 2021, 19:31 IST
ಬಿಬಿಎಂಪಿ ಮುಖ್ಯ ಆಯುಕ್ತರ ಕಚೇರಿ ಎದುರು ಗಿರಿಜಾ ಅವರು ಶನಿವಾರ ಪ್ರತಿಭಟನೆ ನಡೆಸಿದರು
ಬಿಬಿಎಂಪಿ ಮುಖ್ಯ ಆಯುಕ್ತರ ಕಚೇರಿ ಎದುರು ಗಿರಿಜಾ ಅವರು ಶನಿವಾರ ಪ್ರತಿಭಟನೆ ನಡೆಸಿದರು   

ಬೆಂಗಳೂರು: ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ಈ ಬಾರಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಬೇರೆ ನಿರೂಪಕರಿಗೂ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿ, ದೂರದರ್ಶನದ ರಂಗಭೂಮಿ ಕಲಾವಿದೆ ವಿ. ಗಿರಿಜಾ ಶನಿವಾರ ಪ್ರತಿಭಟನೆ ನಡೆಸಿದರು.

ಬಿಬಿಎಂಪಿ ಮುಖ್ಯ ಆಯುಕ್ತರ ಕಚೇರಿ ಎದುರು ಏಕಾಂಗಿಯಾಗಿ ಧರಣಿ ಕುಳಿತಿದ್ದ ಅವರು, ‘ಈ ಕಾರ್ಯಕ್ರಮಗಳಲ್ಲಿ ಹತ್ತು ವರ್ಷಗಳಿಂದ ನಿರೂಪಕರನ್ನು ಬದಲಾವಣೆ ಮಾಡಿಯೇ ಇಲ್ಲ. ಕೆಲವೇ ನಿರೂಪಕರಿಗೆ ನಿರಂತರವಾಗಿ ಈ ಕಾರ್ಯಕ್ರಮದ ನಿರೂಪಣೆಯ ಅವಕಾಶ ಕಲ್ಪಿಸಲಾಗುತ್ತಿದೆ. ಈ ಬಾರಿಯೂ ಅವರಿಗೇ ಅವಕಾಶ ನೀಡಲಾಗಿದೆ’ ಎಂದು ಅವರು ದೂರಿದರು.

‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು, ಬೆಂಗಳೂರು ನಗರ ಜಿಲ್ಲಾಧಿಕಾರಿ ಸೇರಿದಂತೆ, ಈ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೂ ಈ ಸಂಬಂಧ ದೂರು ನೀಡಿದ್ದೇನೆ. ಹಲವು ವರ್ಷಗಳಿಂದ ಓಡಾಡುತ್ತಿದ್ದೇನೆ. ಆದರೂ ನನ್ನ ಮನವಿ ಪುರಸ್ಕರಿಸಿಲ್ಲ’ ಎಂದು ಆರೋಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.