ADVERTISEMENT

ಆಂಧ್ರದಿಂದ ಗಾಂಜಾ ತಂದು ಮಾರಾಟ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 21 ಮೇ 2022, 16:37 IST
Last Updated 21 ಮೇ 2022, 16:37 IST

ಬೆಂಗಳೂರು: ಆಂಧ್ರಪ್ರದೇಶದಿಂದ ನಗರಕ್ಕೆ ಗಾಂಜಾ ತಂದು ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಅರಮನೆ ರಸ್ತೆಯ ಕಾಲೇಜೊಂದರ ಬಳಿ ಆಟೊದಲ್ಲಿ ಆರೋಪಿಗಳು ಗಾಂಜಾ ಮಾರುತ್ತಿದ್ದರು. ಮಾಹಿತಿ ಬರುತ್ತಿದ್ದಂತೆಯೇ ದಾಳಿ ಮಾಡಿ, ಇಬ್ಬರನ್ನೂ ಬಂಧಿಸಲಾಯಿತು. ಅವರಿಂದ ₹ 5.20 ಲಕ್ಷ ಮೌಲ್ಯದ 8 ಕೆ.ಜಿ 850 ಗ್ರಾಂ ಗಾಂಜಾ, ಆಟೊ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆಂಧ್ರಪ್ರದೇಶದ ನಿವಾಸಿಗಳಾದ ಆರೋಪಿಗಳು, ತಮ್ಮೂರಿನಿಂದಲೇ ಆಗಾಗ ನಗರಕ್ಕೆ ಗಾಂಜಾ ತರುತ್ತಿದ್ದರು. ಕೆಲ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಮಾರುತ್ತಿದ್ದರು. ಇದರಿಂದ ಹಣ ಸಂಪಾದಿಸಿ, ಐಷಾರಾಮಿ ಜೀವನ ನಡೆಸುತ್ತಿದ್ದರು’ ಎಂದೂ ತಿಳಿಸಿದರು.

ADVERTISEMENT

‘ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೃತ್ಯದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿರುವ ಮಾಹಿತಿ ಇದ್ದು, ತನಿಖೆ ಮುಂದುವರಿಸಲಾಗಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.