ಆನೇಕಲ್: ತಾಲ್ಲೂಕಿನ ದೊಮ್ಮಸಂದ್ರ ಸಮೀಪದ ದಿ ಇಂಟರ್ನ್ಯಾಷನಲ್ ಬೆಂಗಳೂರು ವಸತಿ ಶಾಲೆಯ 33 ವಿದ್ಯಾರ್ಥಿಗಳು ಮತ್ತು ಒಬ್ಬ ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಈ ಪೈಕಿ 6 ವಿದ್ಯಾರ್ಥಿಗಳು ಹೊರರಾಜ್ಯದವರು. ಅಲ್ಲದೇ, ಮರಸೂರು ಸಮೀಪದ ಸ್ಫೂರ್ತಿ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಈ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.