ಬೆಂಗಳೂರು: ಆನೇಕಲ್ ತಾಲ್ಲೂಕಿನ ಸರ್ಜಾಪುರ ಹೋಬಳಿ ಹಾಗೂ ಬಿಕ್ಕನಹೊಸಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಭೂಸ್ವಾಧೀನ ಕೈಬಿಡುವಂತೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆನೇಕಲ್ ತಾಲ್ಲೂಕು ಭೂಸ್ವಾಧೀನ ವಿರೋಧ ಹೋರಾಟ ಸಮಿತಿ ನೇತೃತ್ವದಲ್ಲಿ ಶುಕ್ರವಾರ ರೈತರು ಪ್ರತಿಭಟನೆ ನಡೆಸಿದರು.
ಈ ಭಾಗದ ರೈತರು 10 ಗುಂಟೆಯಿಂದ 1 ಎಕರೆಯಷ್ಟು ಜಮೀನು ಹೊಂದಿದ್ದಾರೆ. ರೈತರು ಕೃಷಿ ಹಾಗೂ ಹೈನುಗಾರಿಕೆ ಅವಲಂಬಿಸಿದ್ದಾರೆ. ಈ ಜಮೀನು ಸ್ವಾಧೀನ ಪಡಿಸಿಕೊಂಡರೆ ರೈತರು ಬೀದಿ ಪಾಲಾಗುತ್ತಾರೆ. ಭೂಸ್ವಾಧೀನ ಕೈಬಿಡಬೇಕು ಎಂದು ರೈತರು ಆಗ್ರಹಿಸಿದರು.
‘ಯಾವುದೇ ಕಾರಣಕ್ಕೂ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ ಕೃಷಿ ಜಮೀನು ನೀಡುವುದಿಲ್ಲ’ ಎಂದು ಹೇಳಿದ ರೈತರು, ‘ನಮ್ಮ ಭೂಮಿ ನಮ್ಮ ಹಕ್ಕು’ ಎಂದು ಘೋಷಣೆ ಕೂಗಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.