ADVERTISEMENT

ಮತ್ತೆ ಚಿರತೆ ಪ್ರತ್ಯಕ್ಷ; ಸೆರೆಗೆ ಬೋನು

​ಪ್ರಜಾವಾಣಿ ವಾರ್ತೆ
Published 6 ಜನವರಿ 2024, 23:22 IST
Last Updated 6 ಜನವರಿ 2024, 23:22 IST
   

ಆನೇಕಲ್: ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದ ಸರ್ಕಾರಿ ಶಾಲೆಯ ಹಿಂಭಾಗದಲ್ಲಿ ಶನಿವಾರ ಚಿರತೆ ಪ್ರತ್ಯಕ್ಷವಾಗಿದೆ.

ಗ್ರಾಮದ ನಿರ್ಜನ ಬೀದಿಯಲ್ಲಿ ರಾತ್ರಿ ಚಿರತೆ ಓಡಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೂಡ್ಲು, ಗಟ್ಟಹಳ್ಳಿ, ಹುಸ್ಕೂರು, ಗೋಪಸಂದ್ರ ಸಮೀಪ ಈಚೆಗೆ ಚಿರತೆ ಓಡಾಟ ಆತಂಕ ಮೂಡಿಸಿದೆ.

ಎರಡು ಮೂರು ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿಯಲು ನಡೆಸಿರುವ ಪ್ರಯತ್ನ ಫಲಿಸಿಲ್ಲ. ಶುಕ್ರವಾರ ಹುಸ್ಕೂರು ಸಮೀಪ ಬೋನಿಟ್ಟು ಚಿರತೆ ಹಿಡಿಯುವ ಪ್ರಯತ್ನ ನಡೆಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.