ADVERTISEMENT

ಆನೇಕಲ್ | ರಸ್ತೆ ಗುಂಡಿ ಮುಚ್ಚಿಸಿ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ: ಕೃಷ್ಣಪ್ಪ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2025, 16:12 IST
Last Updated 31 ಆಗಸ್ಟ್ 2025, 16:12 IST
ಆನೇಕಲ್ ತಾಲ್ಲೂಕಿನ ಕೋಳಿಫಾರಂ ಗೇಟ್-ಬನ್ನೇರುಘಟ್ಟ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಶಾಸಕ ಎಂ.ಕೃಷ್ಣಪ್ಪ ಚಾಲನೆ ನೀಡಿದರು
ಆನೇಕಲ್ ತಾಲ್ಲೂಕಿನ ಕೋಳಿಫಾರಂ ಗೇಟ್-ಬನ್ನೇರುಘಟ್ಟ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಶಾಸಕ ಎಂ.ಕೃಷ್ಣಪ್ಪ ಚಾಲನೆ ನೀಡಿದರು   

ಆನೇಕಲ್: ತಾಲ್ಲೂಕಿನ ಬನ್ನೇರುಘಟ್ಟ ಸಮೀಪದ ಕೋಳಿ ಫಾರ್ಮ್‌ ಗೇಟ್‌-ಬನ್ನೇರುಘಟ್ಟ ರಸ್ತೆ ಗುಂಡಿಗಳಿಂದ ತುಂಬಿತ್ತು. ಸಾರ್ವಜನಿಕರ ಬೇಡಿಕೆಯಂತೆ ರಸ್ತೆ ಗುಂಡಿಗಳನ್ನು ಮುಚ್ಚಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ ಎಂದು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ತಿಳಿಸಿದರು.

ಕೋಳಿಫಾರ್ಮ್‌ ಗೇಟ್‌-ಬನ್ನೇರುಘಟ್ಟ ರಸ್ತೆಯಲ್ಲಿ ರಸ್ತೆ ಗುಂಡಿಗಳಿಂದಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಓಡಾಟವಿರುವುದರಿಂದ ರಾತ್ರಿ 11ರ ಸುಮಾರಿಗೆ ರಸ್ತೆ ಗುಂಡಿ ಮುಚ್ಚಿಸಲಾಗಿದೆ. ಇದರಿಂದ ಗಿ ಸಾರ್ವಜನಿಕರ ಸಂಚಾರಕ್ಕೆ ಉಪಯುಕ್ತವಾಗಿದೆ. ರಸ್ತೆಯಲ್ಲಿ ಸಂಪೂರ್ಣ ಡಾಂಬರೀಕರಣ ಮಾಡಲಾಗಿದೆ. ರಸ್ತೆ ಗುಂಡಿಗಳಿಂದಾಗಿ ಸಾರ್ವಜನಿಕರ ದೂರುಗಳು ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಕ್ರಮ ವಹಿಸಲಾಗಿದೆ ಎಂದರು.

ಮುಖಂಡರಾದ ಟಿ.ನಾರಾಯಣ್‌, ಜಯರಾಮ್‌ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.