ADVERTISEMENT

ಅಂಗನವಾಡಿಗಳಿಗೆ ಹೆಚ್ಚಿನ ಅನುದಾನ: ಒತ್ತಾಯ

​ಪ್ರಜಾವಾಣಿ ವಾರ್ತೆ
Published 25 ಜೂನ್ 2019, 19:55 IST
Last Updated 25 ಜೂನ್ 2019, 19:55 IST
ಕೃಪಾ ಆಳ್ವ ಮಾತನಾಡಿದರು. ಸಾಮಾಜಿಕ ಪರಿವರ್ತನಾ ಜನಾಂದೋಲನದ ಪ್ರಧಾನ ಕಾರ್ಯದರ್ಶಿ ವೈ.ಮರಿಸ್ವಾಮಿ, ಸಂಸ್ಥೆಯ ಅಧ್ಯಕ್ಷ ಅಂಬಣ್ಣ ಅರೋಲಿಕರ್ ಹಾಗೂ ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಇದ್ದರು –ಪ್ರಜಾವಾಣಿ ಚಿತ್ರ
ಕೃಪಾ ಆಳ್ವ ಮಾತನಾಡಿದರು. ಸಾಮಾಜಿಕ ಪರಿವರ್ತನಾ ಜನಾಂದೋಲನದ ಪ್ರಧಾನ ಕಾರ್ಯದರ್ಶಿ ವೈ.ಮರಿಸ್ವಾಮಿ, ಸಂಸ್ಥೆಯ ಅಧ್ಯಕ್ಷ ಅಂಬಣ್ಣ ಅರೋಲಿಕರ್ ಹಾಗೂ ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಇದ್ದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಮಕ್ಕಳ ಬಾಲ್ಯ ಶಿಕ್ಷಣಅಂಗನವಾಡಿಯಿಂದ ಆರಂಭವಾಗುತ್ತದೆ. ಈ ಮಟ್ಟದಲ್ಲಿ ಮಕ್ಕಳಿಗೆ ಶಿಕ್ಷಣ, ಆರೈಕೆ ಹಾಗೂ ಆರೋಗ್ಯ ಸುಧಾರಿಸಿ ಪೋಷಿಸಬೇಕು. ಇದಕ್ಕಾಗಿ ಸರ್ಕಾರ ಅಂಗನವಾಡಿಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು’ ಎಂದು ಕೃಪಾ ಆಳ್ವ ಒತ್ತಾಯಿಸಿದರು.

ಸಾಮಾಜಿಕ ಪರಿವರ್ತನಾ ಜನಾಂದೋಲನ (ಎಸ್‌ಪಿಜೆ) ವತಿಯಿಂದ ಮಂಗಳವಾರ ಆಯೋಜಿಸಿದ್ದ ‘ಮಕ್ಕಳ ಪೋಷಣೆ ಮತ್ತು ಶಿಕ್ಷಣ’ದ (ಇಸಿಸಿಇ) ದುಂಡುಮೇಜಿನ ಸಭೆಯಲ್ಲಿ ಅವರು ಮಾತನಾಡಿದರು.

ಕ್ರೈ ಸಂಸ್ಥೆಯ ವಕಾಲತ್ತು ವಿಭಾಗದ ಮುಖ್ಯಸ್ಥೆ ವರ್ಷಾ ಶರ್ಮ ಮಾತನಾಡಿ, ‘ದಲಿತರು, ಆದಿವಾಸಿಗಳು, ಧಾರ್ಮಿಕ ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದ ಮಕ್ಕಳು ಬಾಲ್ಯದ ಆರೈಕೆಗಾಗಿ ಅಂಗನವಾಡಿಗಳನ್ನು ಅವಲಂಬಿಸಿರುತ್ತಾರೆ. ಹೀಗಾಗಿ ಇವುಗಳ ಅಭಿವೃದ್ಧಿ‌ಗೆ ಸರ್ಕಾರ ಗಮನ ಹರಿಸಬೇಕು’ ಎಂದರು.

ADVERTISEMENT

‘ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ಎಲ್ಲ ಅಂಗನವಾಡಿ ಶಿಕ್ಷಕರನ್ನು ಕಾಯಂ ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.