ADVERTISEMENT

ಶಾಸಕರ ನಕಲಿ ಲೆಟರ್ ಹೆಡ್‌ ಬಳಸಿ ಪಿ.ಎ ಹುದ್ದೆ: ಮತ್ತೊಬ್ಬ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2024, 0:21 IST
Last Updated 27 ಆಗಸ್ಟ್ 2024, 0:21 IST
<div class="paragraphs"><p>ಬಂಧನ( ಸಾಂಕೇತಿಕ ಚಿತ್ರ)</p></div>

ಬಂಧನ( ಸಾಂಕೇತಿಕ ಚಿತ್ರ)

   

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಕಲಿ ಲೆಟರ್ ಹೆಡ್ ಮತ್ತು ಸಹಿ ಬಳಸಿಕೊಂಡು ಆಪ್ತ ಸಹಾಯಕಿ ಹುದ್ದೆ ಗಿಟ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣಾ ಪೊಲೀಸರು ಮತ್ತೊಬ್ಬ ಆರೋಪಿ ರಾಮನಗರದ ಅಂಜನ್ ಕುಮಾರ್ (28) ಎಂಬಾತನನ್ನು ಬಂಧಿಸಿದ್ದಾರೆ.

ಶಾಸಕರ ಆಪ್ತ ಸಹಾಯಕಿ ಹುದ್ದೆ ಗಿಟ್ಟಿಸಿದ್ದ ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಸೋಲೂರು ನಿವಾಸಿ ಕೆ.ಸಿ.ವಿನುತಾ ಅವರ ಪತಿ ಸ್ವಾಮಿಯನ್ನು ಭಾನುವಾರ ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿ ಸ್ವಾಮಿ, ಶಾಸಕ ಎಸ್.ರಘು ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ಅಂಜನ್ ಕುಮಾರ್‌ ಎಂಬಾತನಿಗೆ ಕೆಲಸ ಕೊಡಿಸಿದ್ದ ಸಂಗತಿಯನ್ನು ತಿಳಿಸಿದ್ದ. ಇಬ್ಬರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆಗೆ ಬರುವಂತೆ ವಿನುತಾಗೂ ನೋಟಿಸ್‌ ನೀಡಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.