ADVERTISEMENT

ಎಪಿಡಿ: 4ರಂದು ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2019, 19:33 IST
Last Updated 1 ಅಕ್ಟೋಬರ್ 2019, 19:33 IST

ಬೆಂಗಳೂರು:ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ (ಎಪಿಡಿ) ಸಂಸ್ಥೆಯು ಸಂಸ್ಥೆಯ ಸಂಸ್ಥಾಪಕಿ ಎನ್.ಎಸ್. ಹೇಮಾ ಸ್ಮರಣಾರ್ಥ ಪ್ರಶಸ್ತಿ ಪ್ರದಾನ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಶುಕ್ರವಾರ (ಅ.4) ಬೆಳಿಗ್ಗೆ 10 ಗಂಟೆಗೆ ಬಾಲಭವನದಲ್ಲಿ ಆಯೋಜಿಸಿದೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಕ್ರಿಸ್ಟಿ ಅಬ್ರಹಾಂ, ‘ಸಂಸ್ಥೆಯು 60 ವರ್ಷಗಳನ್ನು ಪೂರೈಸಿದ್ದು,ಅಂಗವಿಕಲರ ಸಬಲೀಕರಣಕ್ಕಾಗಿ ಶ್ರಮಿಸುತ್ತಿದೆ. ದೇಶದಲ್ಲಿ ಅಂಗವಿಕಲರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವಸಂಘ–ಸಂಸ್ಥೆಗಳನ್ನು ಗುರುತಿಸಿ, ಪ್ರಶಸ್ತಿ ನೀಡಲಾಗುವುದು.ಈ ಪ್ರಶಸ್ತಿಯು ₹ 1 ಲಕ್ಷ ನಗದು ಬಹುಮಾನ ಒಳಗೊಂಡಿದೆ. ಕಾರ್ಯಕ್ರಮದ ದಿನದಂದೇ ಪ್ರಶಸ್ತಿ ವಿಜೇತರನ್ನು ಘೋಷಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT