ADVERTISEMENT

ಆ್ಯಪ್‌ ಆಧಾರಿತ ಆಟೊರಿಕ್ಷಾ ಸೇವೆ: ಆದೇಶಕ್ಕೆ ತಡೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2023, 21:47 IST
Last Updated 4 ಜನವರಿ 2023, 21:47 IST
   

ಬೆಂಗಳೂರು: ಆ್ಯಪ್ ಆಧಾರಿತ ಆಟೊರಿಕ್ಷಾ ಸೇವೆಗೆ ದರ ನಿಗದಿಪಡಿಸಿ ಸಾರಿಗೆ ಇಲಾಖೆಯು 2022ರ ನವೆಂಬರ್ 25ರಂದು ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.‌

ಅಧಿಸೂಚನೆ ಪ್ರಶ್ನಿಸಿ ಓಲಾ, ಉಬರ್ ಇಂಡಿಯಾ ಟೆಕ್ನಾಲಜೀಸ್ ಪ್ರೈವೇಟ್‌ ಲಿಮಿಟೆಡ್‌ ಹಾಗೂ ರೊಪ್ಪೆನ್ ಟ್ರಾನ್ಸ್‌ಫರ್ಟೇಶನ್‌ ಸರ್ವೀಸಸ್ (ರ್‍ಯಾಪಿಡೊ) ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ. ‘ಆ್ಯಪ್ ಆಧಾರಿತ ಆಟೊರಿಕ್ಷಾ ಸೇವೆ ಸ್ಥಗಿತಗೊಳಿಸುವಂತೆ ಸಾರಿಗೆ ಇಲಾಖೆ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳು ಇತ್ಯರ್ಥವಾಗುವವರೆಗೆ, ಅಧಿಸೂಚನೆಗೆ ತಡೆ ನೀಡಲಾಗಿದೆ‘ ಎಂದ ನ್ಯಾಯಪೀಠ ವಿಚಾರಣೆಯನ್ನು ಇದೇ 12ಕ್ಕೆ ಮುಂದೂಡಿದೆ.

ಆ್ಯಪ್ ಆಧಾರಿತ ಆಟೊರಿಕ್ಷಾ ಸೇವೆ ಸ್ಥಗಿತಗೊಳಿಸುವಂತೆ ಸೂಚಿಸಿ 2022ರ ಅ. 11ರಂದು ಹೊರಡಿಸಿರುವ ಇಲಾಖೆ ಆದೇಶ ಪ್ರಶ್ನಿಸಿ ಅಗ್ರಿಗೇಟರ್ ಸಂಸ್ಥೆಗಳು ಹೈಕೋರ್ಟ್‌ ಮೆಟ್ಟಿಲೇರಿದ್ದವು. ವಿಚಾರಣೆ ವೇಳೆ ರಾಜ್ಯ ಸರ್ಕಾರ, ‘ಹೈಕೋರ್ಟ್ ಸಲಹೆಯಂತೆ ಸಮಸ್ಯೆಯನ್ನು ಬಗೆಹರಿಸಲಾಗುವುದು’ ಎಂದಿತ್ತು. ಇಲಾಖೆ ಅಧಿಸೂಚನೆ ಪ್ರಶ್ನಿಸಿ ಹೈಕೋರ್ಟ್‌ಗೆ ಮತ್ತೊಂದು ರಿಟ್‌ ಅರ್ಜಿ ಸಲ್ಲಿಸಿದ್ದ ಅಗ್ರಿಗೇಟರ್ ಸಂಸ್ಥೆಗಳು, ‘ದರ ನಿಗದಿಪಡಿಸಲು ರಾಜ್ಯ ಸರ್ಕಾರ ಸಕ್ಷಮ ಪ್ರಾಧಿಕಾರವಲ್ಲ‘ ಎಂದಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.