ADVERTISEMENT

ಜು.23ರಿಂದ ಎಪಿಪಿ ಮುಖ್ಯ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 4:11 IST
Last Updated 7 ಜುಲೈ 2022, 4:11 IST

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ 205 ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್ (ಎಪಿಪಿ) ಹುದ್ದೆಗಳ ನೇಮಕಾತಿಗೆ ಇದೇ 23 ಮತ್ತು 24ರಂದು ಮುಖ್ಯ ಪರೀಕ್ಷೆ ನಡೆಯಲಿದೆ.

ರಾಜ್ಯ ಅಭಿಯೋಗ ಹಾಗೂ ಸರ್ಕಾರಿ ವ್ಯಾಜ್ಯಗಳ ಇಲಾಖೆ ಈ ಸಂಬಂಧ ಇದೇ 5ರಂದು ಅಧಿಸೂಚನೆ ಹೊರಡಿಸಿದೆ.

ಪರೀಕ್ಷೆಯ ಸಮಯ, ಕೇಂದ್ರದ ವಿವರ ಹಾಗೂ ಪ್ರವೇಶ ಪತ್ರ ಪಡೆಯುವ ವಿಷಯಗಳಿಗೆ ಸಂಬಂಧಿಸಿದಂತೆ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‌ಎಲ್‌ಎಸ್‌ಐಯು) ವೆಬ್‌ಸೈಟ್‌ನಲ್ಲಿ ಸಂಪೂರ್ಣ ಮಾಹಿತಿ ಲಭ್ಯವಿದೆ. ರಾಜ್ಯದ ಒಟ್ಟು 4 ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.