ADVERTISEMENT

ಸ್ಮಾರ್ಟ್ ಸಿಟಿ ಕಾಮಗಾರಿ; ಆಮ್ ಆದ್ಮಿ ಪಕ್ಷ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2020, 4:26 IST
Last Updated 16 ಅಕ್ಟೋಬರ್ 2020, 4:26 IST
ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು
ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು   

ಬೆಂಗಳೂರು: ‘ಕಮರ್ಷಿಯಲ್‌ ಸ್ಟ್ರೀಟ್ ಹಾಗೂ ಕಾಮರಾಜ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಇದರಿಂದ ವ್ಯಾಪಾರಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

‘ಕಾಮಗಾರಿ ಆರಂಭವಾಗಿ ಎಂಟು ತಿಂಗಳು ಆಗಿದ್ದು, ನಿಧಾನಗತಿಯಲ್ಲಿ ಸಾಗಿದೆ. ರಸ್ತೆಯನ್ನು ಅಗೆದು ಹಾಕಲಾಗಿದ್ದು, ಜನರು ಓಡಾಡದ ಸ್ಥಿತಿ ಇದೆ. ಯಾರೊಬ್ಬರೂ ವ್ಯಾಪಾರಕ್ಕಾಗಿ ಅಂಗಡಿಗಳಿಗೆ ಬರು ತ್ತಿಲ್ಲ. ಕಾಮಗಾರಿ ಉಸ್ತುವಾರಿ ವಹಿಸಿ ಕೊಂಡಿರುವ ಮೇಲ್ವಿಚಾರಕರು ಸ್ಥಳೀಯ ವ್ಯಾಪಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ’ ಎಂದು ಪ್ರತಿಭಟನ
ಕಾರರು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT