ಸಾಂದರ್ಭಿಕ ಚಿತ್ರ
ಬೆಂಗಳೂರು: ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹೊಂಗಿರಣ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶಕ್ಕೆ ಅರ್ಹತೆಪಡೆಯುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಶಾಲೆ ಹಾಗೂ ಸರ್ಕಾರಿ ಕಾಲೇಜಿನಲ್ಲಿ ಓದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಅರ್ಹ ಆಸಕ್ತರು ಹೊಂಗಿರಣ ಚಾರಿಟಬಲ್ ಟ್ರಸ್ಟ್‌ನ ವೆಬ್‌ಸೈಟ್‌ಗೆ ಭೇಟಿ ನೀಡಿ (http://hongirana.org/project/hongirana-schlorship-program/) ಅರ್ಜಿ ಭರ್ತಿ ಮಾಡಬಹುದು. ಅಥವಾ ಅಗತ್ಯ ದಾಖಲೆಗಳಾದ ಆಧಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ, ಕುಟುಂಬದ ವಿವರ, ವಿದ್ಯಾಭ್ಯಾಸದ ಪ್ರಮಾಣ ಪತ್ರಗಳೊಂದಿಗೆ ಹೊಂಗಿರಣ ಚಾರಿಟಬಲ್ ಟ್ರಸ್ಟ್ ಸಿಇಒ ವಿನಯ್ ಬಿ.ಎಸ್. (7204123667), ಶಿವಪ್ರಕಾಶ್ ಎಸ್. (9740010544) ಅವರನ್ನು ಸಂಪರ್ಕಿಸಬಹುದು ಎಂದು ಟ್ರಸ್ಟ್‌ನವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.