ADVERTISEMENT

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2024, 16:07 IST
Last Updated 10 ಏಪ್ರಿಲ್ 2024, 16:07 IST
ಅರ್ಜಿ ಆಹ್ವಾನ (ಸಾಂದರ್ಭಿಕ ಚಿತ್ರ)
ಅರ್ಜಿ ಆಹ್ವಾನ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ಕಾಗಿನೆಲೆ ಕನಕ ಗುರುಪೀಠದ ಹೊಸದುರ್ಗ ಶಾಖಾ ಮಠದಿಂದ ಕುರುಬ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಪ್ರತಿಭಾ ಪುರಸ್ಕಾರ ನೀಡಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಂಕಪಟ್ಟಿ ಹಾಗೂ ವರ್ಗಾವಣೆ ಪತ್ರಗಳ ಜೆರಾಕ್ಸ್ ಪ್ರತಿಯನ್ನು ಅಂಚೆ ಮೂಲಕ  ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ, ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾಮಠ ಬೆಂಗಳೂರು, ಕನಕ ಭವನ 10ನೇ ಅಡ್ಡರಸ್ತೆ ಚಂದ್ರಾಲೇಔಟ್ 1ನೇ ಹಂತ ಬೆಂಗಳೂರು 560072 ಇಲ್ಲಿಗೆ ಜುಲೈ 12ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಮಾಹಿತಿಗೆ ಮೊಬೈಲ್‌ ಸಂಖ್ಯೆ: 9036597972, 9916974936, ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT