ADVERTISEMENT

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 22:15 IST
Last Updated 4 ಜುಲೈ 2025, 22:15 IST
   

ಬೆಂಗಳೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಮಡಿವಾಳ ಜನಾಂಗದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಕರ್ನಾಟಕ ರಾಜ್ಯ ಮಡಿವಾಳರ ಸಂಘವು ಅರ್ಜಿ ಆಹ್ವಾನಿಸಿದೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಆರ್.ಪ್ರಕಾಶ್, ‘ಜನಾಂಗದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. 2025–26ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಶೇ 70 ಮತ್ತು ಪಿಯುಸಿಯಲ್ಲಿ ಶೇ 90 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹರು ಅಂಕಪಟ್ಟಿ, ಇತ್ತೀಚಿನ ಎರಡು ಭಾವಚಿತ್ರ, ಆಧಾರ್ ಕಾರ್ಡ್, ಸ್ವ ವಿಳಾಸ, ಮೊಬೈಲ್ ಸಂಖ್ಯೆ ಸಹಿತ ಅಗತ್ಯ ಮಾಹಿತಿಯನ್ನು ಇದೇ 30ರೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಕರ್ನಾಟಕ ರಾಜ್ಯ ಮಡಿವಾಳರ ಸಂಘ, ನಂ. 7, ಶಿರೂರ್ ಪಾರ್ಕ್ ರಸ್ತೆ, ಶೇಷಾದ್ರಿಪುರ, ಬೆಂಗಳೂರು– 560 020 ಈ ವಿಳಾಸಕ್ಕೆ ಕಳುಹಿಸಬೇಕು’ ಎಂದು ತಿಳಿಸಿದರು. 

ಸಂಪರ್ಕಕ್ಕೆ: 080–23460946 ಅಥವಾ 9611664485 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.