ADVERTISEMENT

ಜಲಮಂಡಳಿಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2025, 19:26 IST
Last Updated 18 ನವೆಂಬರ್ 2025, 19:26 IST
ಜಲಮಂಡಳಿ
ಜಲಮಂಡಳಿ   

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕೇತರ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಬೆಂಗಳೂರು ಜಲಮಂಡಳಿಯ ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ ಸಿ.ಮದನಮೋಹನ್‌ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ನ.25 ಹಾಗೂ ಶುಲ್ಕ ಪಾವತಿಸಲು ನ.26 ಕೊನೆಯ ದಿನವಾಗಿದೆ. ನೇಮಕಾತಿಯ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea ದಲ್ಲಿ ಪಡೆಯಬಹುದು ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.