ADVERTISEMENT

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 0:09 IST
Last Updated 23 ಫೆಬ್ರುವರಿ 2026, 0:09 IST
<div class="paragraphs"><p>ಕಡತ</p></div>

ಕಡತ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ನಗರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ADVERTISEMENT

ಆನೇಕಲ್ ತಾಲ್ಲೂಕಿನ ಆನೇಕಲ್, ಅತ್ತಿಬೆಲೆ, ಬೊಮ್ಮಸಂದ್ರ, ಚಂದಾಪುರ, ಜಿಗಣಿ, ಹೆಬ್ಬುಗೋಡಿ, ಉತ್ತರ ತಾಲ್ಲೂಕಿನ ಚಿಕ್ಕಬಾಣಾವರ, ಮಾದನಾಯಕನಹಳ್ಳಿ, ದಕ್ಷಿಣ ತಾಲ್ಲೂಕಿನ ಕೋನಪ್ಪನ ಅಗ್ರಹಾರ, ದೊಡ್ಡತೋಗೂರು ಮತ್ತು
ಯಲಹಂಕ ತಾಲ್ಲೂಕಿನ ಹುಣಸಮಾರನಹಳ್ಳಿಯಲ್ಲಿ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಬಹುದು.

ಆಸಕ್ತ ಅಭ್ಯರ್ಥಿಗಳು https://www.karnatakaone.gov.in/public/franchiseeTerms ನಲ್ಲಿ ಮಾರ್ಚ್‌ 2ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಇನ್ನಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿ
ಪರಿಗಣಿಸುವುದಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.