ADVERTISEMENT

ಬಿಎಂಟಿಸಿ ವಿದ್ಯಾರ್ಥಿ ಪಾಸ್‌: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 25 ಮೇ 2025, 19:19 IST
Last Updated 25 ಮೇ 2025, 19:19 IST
   

ಬೆಂಗಳೂರು: ಬಿಎಂಟಿಸಿ ಬಸ್‌ಗಳಲ್ಲಿ ಉಚಿತ/ರಿಯಾಯಿತಿ ದರದಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳು ಪಾಸ್‌ಗಾಗಿ ಮೇ 26ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಿದವರಿಗೆ ಜೂನ್‌ 1ರಿಂದ ವಿದ್ಯಾರ್ಥಿ ಪಾಸ್‌ಗಳನ್ನು ವಿತರಣೆ ಮಾಡಲಾಗುವುದು. ಸೇವಾಸಿಂಧು ಪೋರ್ಟಲ್ https://sevasindhu.karnataka.gov.inನಲ್ಲಿ ಅರ್ಜಿ ನಮೂನೆ ಲಭ್ಯವಿದೆ. ಬೆಂಗಳೂರು ಒನ್ ಕೇಂದ್ರಗಳ ಮೂಲಕವು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು ಒನ್ ಕೇಂದ್ರಗಳಲ್ಲಿ ಹಾಗೂ ಬಿಎಂಟಿಸಿಯ ಕೆಂಪೇಗೌಡ ಬಸ್‌ ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಘಟಕ -19, ಶಾಂತಿನಗರ ಟಿಟಿಎಂಸಿ, ಕೆಎಸ್‌ಆರ್‌ಟಿಸಿಯ ಆನೇಕಲ್ ಬಸ್ ನಿಲ್ದಾಣಗಳಲ್ಲಿ ಪಾಸ್‌ ವಿತರಿಸಲಾಗುವುದು.

ADVERTISEMENT

ಶಕ್ತಿ ಯೋಜನೆಯಡಿ ವಿದ್ಯಾರ್ಥಿನಿಯರಿಗೆ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಇದೆ. ಮಾಹಿತಿಗಾಗಿ ಸಂಸ್ಥೆಯ ಸಹಾಯ ವಾಣಿ ಸಂಖ್ಯೆ 080–22483777 ಸಂಪರ್ಕಿಸಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.