ADVERTISEMENT

ಕಾಂಗ್ರೆಸ್ ಸಮಿತಿಗೆ ಕುಪ್ಪಿ ಮಂಜುನಾಥ್ ನೇಮಕ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2025, 16:03 IST
Last Updated 7 ಅಕ್ಟೋಬರ್ 2025, 16:03 IST
ಕುಪ್ಪಿ ಮಂಜುನಾಥ್
ಕುಪ್ಪಿ ಮಂಜುನಾಥ್   

ಕೆ.ಆರ್.ಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಬೆಂಗಳೂರು ಪೂರ್ವ ಜಿಲ್ಲಾ ಅಧ್ಯಕ್ಷರಾಗಿ ವರ್ತೂರಿನ ಕುಪ್ಪಿ ಮಂಜುನಾಥ್ ಅವರನ್ನು ನೇಮಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗ ಅಧ್ಯಕ್ಷ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ.

ರಾಜ್ಯ-ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಹಿಂದುಳಿದ ವರ್ಗಗಳ ವಿಭಾಗದ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ತಾವು ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ ಎಂದು  ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT