ಬೆಂಗಳೂರು: ಕಾಂಗ್ರೆಸ್ ಮುಖಂಡರಾದ ಆರತಿ ಕೃಷ್ಣ ಅವರನ್ನು ರಾಜ್ಯ ಸರ್ಕಾರದ ಅನಿವಾಸಿ ಭಾರತೀಯರ ಕೋಶದ ಉಪಾಧ್ಯಕ್ಷರನ್ನಾಗಿ ನೇಮಿಸಿದ್ದು, ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಲಾಗಿದೆ.
ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರ ಜತೆ ಸಂಪರ್ಕ ಸಾಧಿಸುವುದು, ಅವರಿಂದ ರಾಜ್ಯದ ಅಭಿವೃದ್ಧಿಗೆ ನೆರವು ಪಡೆಯುವುದು, ಅವರ ಕುಂದುಕೊರತೆಗಳ ನಿವಾರಣೆಯ ಕೆಲಸವನ್ನು ಅನಿವಾಸಿ ಭಾರತೀಯರ ಕೋಶವು ಮಾಡಲಿದೆ. ಆರತಿ ಅವರು ಹಿಂದೆಯೂ ಒಂದು ಅವಧಿಗೆ ಈ ಕೋಶದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಆರತಿ ಅವರನ್ನು ಅನಿವಾಸಿ ಭಾರತೀಯರ ಕೋಶದ ಉಪಾಧ್ಯಕ್ಷರನ್ನಾಗಿ ನೇಮಿಸಿ ಮಂಗಳವಾರ ಆದೇಶ ಹೊರಡಿಸಿದ್ದು, ಸಂಪುಟ ದರ್ಜೆ ಸಚಿವರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಒದಗಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಆದೇಶದಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.