ADVERTISEMENT

ಬೆಂಗಳೂರು | ಅಕ್ರಮ ಚಟುವಟಿಕೆಗಳಲ್ಲಿ ಭಾಗಿ: ಗೂಂಡಾ ಕಾಯ್ದೆಯಡಿ ವ್ಯಕ್ತಿಯ ಬಂಧನ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2025, 16:02 IST
Last Updated 5 ಮಾರ್ಚ್ 2025, 16:02 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ ಎಂ.ಬಾಬು(48) ಎಂಬಾತನನ್ನು ಸಿಸಿಬಿ ಪೊಲೀಸರು, ಗೂಂಡಾ ಕಾಯ್ದೆಯ ಅಡಿ ಬಂಧಿಸಿದ್ದಾರೆ.

ADVERTISEMENT

ಮನೆ, ಸಾರ್ವಜನಿಕ ಸ್ಥಳಗಳಲ್ಲಿ ಜೂಜಾಟ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಬಾಬು ತೊಡಗಿದ್ದ. ಪ್ರತಿಬಂಧಕ ಕಾಯ್ದೆ ಅಡಿಯಲ್ಲಿ ಬಾಬುನನ್ನು ಬಂಧಿಸಲು ಅನುಮತಿ ನೀಡುವಂತೆ ಸಿಸಿಬಿ ಅಧಿಕಾರಿಗಳು ಪ್ರಸ್ತಾವ ಸಲ್ಲಿಸಿದ್ದರು. ಆ ಪ್ರಸ್ತಾವಕ್ಕೆ ನಗರ ಪೊಲೀಸ್ ಕಮಿಷನರ್‌ ಬಿ.ದಯಾನಂದ ಅವರು ಒಪ್ಪಿದ್ದರು. ಜತೆಗೆ ಅರೋಪಿಯನ್ನು ಬಂಧಿಸಿ ಶಿವಮೊಗ್ಗದ ಕಾರಾಗೃಹದಲ್ಲಿ ಇಡುವಂತೆ ಆದೇಶ ಹೊರಡಿಸಿದ್ದರು.

‘ಆರೋಪಿಯನ್ನು ಬಂಧಿಸಿ ಶಿವಮೊಗ್ಗ ಕಾರಾಗೃಹಕ್ಕೆ ಕಳುಹಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.