ADVERTISEMENT

‘ಸರ್ಕಾರದಿಂದಲೇ ವಾಸವಿ ಜಯಂತಿ ಆಚರಿಸಿ’

​ಪ್ರಜಾವಾಣಿ ವಾರ್ತೆ
Published 6 ಜೂನ್ 2019, 19:48 IST
Last Updated 6 ಜೂನ್ 2019, 19:48 IST
ವಿಧಾನಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಲಾಂಛನವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಲೋಕಾರ್ಪಣೆ ಮಾಡಿದರು. ಇಲಾಖೆ ಆಯುಕ್ತ ಟಿ.ವಸಂತ್ ಕುಮಾರ್, ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್, ನಿಗಮದ ಅಧ್ಯಕ್ಷ ಟಿ.ಎ.ಶರವಣ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಅನ್ನದಾನಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್.ಕಾಂತರಾಜು ಇದ್ದಾರೆ

ಬೆಂಗಳೂರು: ವಾಸವಿ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸುವಂತೆ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಎ.ಶರವಣ ಇಲ್ಲಿ ಗುರುವಾರ ಒತ್ತಾಯಿಸಿದರು.

ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯದ ಎಲ್ಲ ತಾಲ್ಲೂಕು ಕಚೇರಿಗಳಲ್ಲಿ ಆರ್ಯವೈಶ್ಯ ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ವಿತರಣೆಗೆ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಗ್ರಾಮೀಣ ಭಾಗದಿಂದ ಬರುವ ಸಮುದಾಯದ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ನಗರಕ್ಕೆ ಹೊಂದಿಕೊಂಡಂತೆ 10 ಎಕರೆ ಜಮೀನು ನೀಡಬೇಕು. ನಿಗಮ ಹೊಸದಾಗಿ ಅಸ್ತಿತ್ವಕ್ಕೆ ತಂದಿರುವುದರಿಂದ ತಕ್ಷಣ ಅಧಿಕಾರಿಗಳನ್ನು ನೇಮಿಸಬೇಕು. ನಿಗಮಕ್ಕೆ ₹11 ಕೋಟಿ ಅನುದಾನ ಕೊಡುತ್ತಿದ್ದು, ಈ ಮೊತ್ತವನ್ನು ಮುಂದಿನ ದಿನಗಳಲ್ಲಿ ₹100 ಕೋಟಿಗೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.ಜೆಡಿಎಸ್– ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರವು ನಮ್ಮ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಿದೆ. ಈಗ ನಮ್ಮ ಸಮಾಜಕ್ಕೆ ಸ್ವಾತಂತ್ರ್ಯ ಸಿಕ್ಕಂತಾಗಿದೆ ಎಂದು ಹೇಳಿದರು.

ADVERTISEMENT

ಕ್ರಮದ ಭರವಸೆ:ಆರ್ಯವೈಶ್ಯರಿಗೆ ಆದಾಯ ಹಾಗೂ ಜಾತಿ ಪ್ರಮಾಣ ಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಹಿಂದುಳಿದ ವರ್ಗಗಳ ಇಲಾಖೆಗೆ ಹೆಚ್ಚಿನ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸಲಾಗಿದೆ. ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಭರವಸೆ ನೀಡಿದರು.

ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಕೆ.ಅನ್ನದಾನಿ, ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್.ಕಾಂತರಾಜ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್‌,ಆಯುಕ್ತ ಟಿ.ವಸಂತ್ ಕುಮಾರ್ಇದ್ದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ. ಆದರೆ ಅವರ ಸಂದೇಶ ಓದಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.