ADVERTISEMENT

ಅಶಾ ಕಾರ್ಯಕರ್ತೆಯರಿಗೆ ಸಾಲ ಸೌಲಭ್ಯ: ಚಿಂತನೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2020, 10:50 IST
Last Updated 14 ಜೂನ್ 2020, 10:50 IST
ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರಿಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಗೌರವ ಸಮರ್ಪಿಸಿದರು. ಬಿಬಿಎಂಪಿ ಸದಸ್ಯ ವಿ.ವಿ.ಸತ್ಯನಾರಾಯಣ, ಶಾರದಾ ಮುನಿರಾಜು ಇದ್ದಾರೆ
ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರಿಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಗೌರವ ಸಮರ್ಪಿಸಿದರು. ಬಿಬಿಎಂಪಿ ಸದಸ್ಯ ವಿ.ವಿ.ಸತ್ಯನಾರಾಯಣ, ಶಾರದಾ ಮುನಿರಾಜು ಇದ್ದಾರೆ   

ಕೆಂಗೇರಿ: ‘ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಕಡಿಮೆ ಬಡ್ಡಿದರದಲ್ಲಿ ಡಿಸಿಸಿ ಸೇರಿದಂತೆ ಇನ್ನಿತರೆ ಸಹಕಾರಿ ಸಂಸ್ಥೆಗಳ ಮೂಲಕ ಸಾಲ ಸೌಲಭ್ಯ ಒದಗಿಸಲು ಚಿಂತನೆ ನಡೆಸಲಾಗಿದೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಕೆಂಗೇರಿ ಬಳಿಯ ಬಂಡೆ ಮಠದಲ್ಲಿ ಹಮ್ಮಿಕೊಂಡಿದ್ದ ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಕೋವಿಡ್ ಯೋಧರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಹಾಲಿ 42 ಸಾವಿರ ಮಂದಿ ಆಶಾ ಕಾರ್ಯಕರ್ತೆಯರಿದ್ದು, ಈ ಪೈಕಿ ಸುಮಾರು 11 ಸಾವಿರ ಕಾರ್ಯಕರ್ತರಿಗೆ ತಲಾ ₹3000 ಹಣವನ್ನು ಪ್ರೋತ್ಸಾಹ ಧನವಾಗಿ ನೀಡಲಾಗಿದೆ’ ಎಂದದರು.

‘ಲಾಭದಲ್ಲಿರುವ ಸಹಕಾರಿ ಸಂಸ್ಥೆಗಳಿಂದ ಬಂಡವಾಳ ಕ್ರೋಡೀಕರಿಸಿಕೊಂಡು ಪ್ರೋತ್ಸಾಹ ಧನ ನೀಡಲಾಗುತ್ತಿದೆ. 13 ಜಿಲ್ಲೆಯಲ್ಲಿ ಪ್ರೋತ್ಸಾಹ ಧನ ವಿತರಣೆ ಮಾಡಲಾಗಿದ್ದು, ಶೀಘ್ರದಲ್ಲಿ ಉಳಿದೆಲ್ಲ ಜಿಲ್ಲೆಯ ಕೋವಿಡ್ ಯೋಧರಿಗೆ ಸಂದಾಯ ಮಾಡಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.