ADVERTISEMENT

ಸಮೀಕ್ಷೆಯಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 15:59 IST
Last Updated 16 ಸೆಪ್ಟೆಂಬರ್ 2025, 15:59 IST
<div class="paragraphs"><p>ಆಶಾ ಕಾರ್ಯಕರ್ತೆಯರು (ಸಂಗ್ರಹ ಚಿತ್ರ)</p></div>

ಆಶಾ ಕಾರ್ಯಕರ್ತೆಯರು (ಸಂಗ್ರಹ ಚಿತ್ರ)

   

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ನಡೆಸುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯಲ್ಲಿ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವುದಿಲ್ಲ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ತಿಳಿಸಿದೆ. 

‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕೆಲಸಕ್ಕೆ ಗ್ರಾಮೀಣ ಆಶಾ ಕಾರ್ಯಕರ್ತೆಯರಿಗೆ ₹5 ಸಾವಿರ ಹಾಗೂ ನಗರ ಭಾಗದ ಆಶಾ ಕಾರ್ಯಕರ್ತೆಯರಿಗೆ ₹ 10 ಸಾವಿರ ಗೌರವ ಧನ ನಿಗದಿಪಡಿಸಿ ಆದೇಶಿಸಬೇಕು. ಇಲ್ಲದಿದ್ದರೆ ಸಮೀಕ್ಷೆಯ ಕೆಲಸದಿಂದ ಕೈಬಿಡಬೇಕು’ ಎಂದು ಸಂಘದ ಅಧ್ಯಕ್ಷ  ಕೆ. ಸೋಮಶೇಖರ್‌ ಯಾದಗಿರಿ ಹಾಗೂ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ  ಒತ್ತಾಯಿಸಿದ್ದಾರೆ. 

ADVERTISEMENT

‘ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಸಮೀಕ್ಷೆ ನಡೆಸಿದಾಗ ₹ 1 ಸಾವಿರ ಗೌರವ ಧನ ನಿಗದಿಪಡಿಸಿತ್ತು. ಆದರೆ ಇದುವರೆಗೂ ನೀಡಿಲ್ಲ. ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯಲ್ಲಿ ಕಾರ್ಯನಿರ್ವಹಿಸಿದ ಆಶಾ ಕಾರ್ಯಕರ್ತೆಯರಿಗೆ ನಿಗದಿಯಾಗಿದ್ದ ₹10 ಸಾವಿರ ಗೌರವ ಧನವನ್ನೂ ಪಾವತಿಸಿಲ್ಲ. ಬಾಕಿ ಉಳಿಸಿಕೊಂಡಿರುವ ಗೌರವ ಧನವನ್ನು ಕೂಡಲೇ ಬಿಡುಗಡೆಗೊಳಿಸಬೇಕು’ ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.