ಲಾರ್ವ ಸಮೀಕ್ಷೆ ನಡೆಸಿದ ಆಶಾ ಕಾರ್ಯಕರ್ತೆ
ಬೆಂಗಳೂರು: ಆಶಾ ಕಾರ್ಯಕರ್ತೆಯರ ಗೌರವಧನವನ್ನು ತಿಂಗಳಿಗೆ ₹1 ಸಾವಿರ ಹೆಚ್ಚಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಈ ಬಗ್ಗೆ 2025–26ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಘೋಷಿಸಿತ್ತು. ಈ ಘೋಷಣೆ ಅನ್ವಯ ಆಯುಷ್ಮಾನ್ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರದ ಆರೋಗ್ಯ ಉಪಕೇಂದ್ರಗಳು ಮತ್ತು ನಗರ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡಲಾಗುತ್ತದೆ. ಇದರಿಂದಾಗಿ ಗೌರವಧನ ₹1 ಸಾವಿರ ಹೆಚ್ಚಳವಾಗಿದೆ.
ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಸಾವಿರ ಜನಸಂಖ್ಯೆಗೆ ಹಾಗೂ ನಗರ ಪ್ರದೇಶದಲ್ಲಿ ಎರಡೂವರೆ ಸಾವಿರ ಜನಸಂಖ್ಯೆಗೆ ಒಬ್ಬರಂತೆ ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಲಾಗುತ್ತಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 42,524 ಹುದ್ದೆಗಳು ಮಂಜೂರಾಗಿದ್ದು, ರಾಜ್ಯದಲ್ಲಿ ಸದ್ಯ 41 ಸಾವಿರ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆದೇಶ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.